
ಮಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಎಂಎನ್ಆರ್‌ಇಜಿ) ಯೋಜನೆಯನ್ನು ಕೇಂದ್ರವು ರದ್ದುಪಡಿಸಿದ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದಲ್ಲಿ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಲಿದ್ದೇವೆ. ಇದೇ 26ರಿಂದ ಫೆ. 2ರವರೆಗೆ ಪ್ರತಿ ವಿಧಾನ ಕ್ಷೇತ್ರದಲ್ಲಿ 5 ಕಿ.ಮೀ.ಯಿಂದ 10 ಕೀ.ಮೀ ಪಾದಯಾತ್ರೆ ನಡೆಸಿ ಜನಜಾಗೃತಿ ಮೂಡಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಪಾದಯಾತ್ರೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಸದಸ್ಯರನ್ನು ಹಾಗೂ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಚೀಟಿ ಪಡೆದ ಕಾರ್ಮಿಕರನ್ನು ತೊಡಗಿಸಿಕೊಳ್ಳಲಿದ್ದೇವೆ’ ಎಂದರು.
‘ಈ ಯೋಜನೆಯಡಿ ರಾಜ್ಯಕ್ಕೆ ಪ್ರತಿ ವರ್ಷ ₹ 6ಸಾವಿರ ಕೋಟಿಗಳಷ್ಟು ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದವು. ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲಿ ತಲಾ ₹ 1 ಕೋಟಿಗಳನ್ನು ಮೊತ್ತದಷ್ಟು ಕೆಲಸಗಳಾಗುತ್ತಿದ್ದವು. ಇಡೀ ಯೋಜನೆಯನ್ನೇ ಮುಗಿಸಲು ಹೊರಟಿದ್ದಾರೆ. ಈ ಬಗ್ಗೆ ಇದರ ಫಲಾನುಭವಿಗಳನ್ನು ಜಾಗೃತಿ ಮೂಡಿಸಲಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.