
ಬಂಟ್ವಾಳ: ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೊಳಿಸಿ ಗ್ರಾಮ ಪಂಚಾಯಿತಿಗಳನ್ನು ಬಲಪಡಿಸಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹೆಸರು ಮತ್ತು ಮೂಲ ಸ್ವರೂಪ ಬದಲಾಯಿಸಿ ಶೇ 90ರ ಬದಲಿಗೆ ಶೇ 60ಕ್ಕೆ ಅನುದಾನ ಕಡಿತಗೊಳಿಸುವ ಮೂಲಕ ರಾಜ್ಯ ಸರ್ಕಾರಕ್ಕೆ ಹೊರೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಮುಖಂಡ ಬಿ.ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಬಿ.ಸಿ.ರೋಡು ಆಡಳಿತ ಸೌಧ ಎದುರು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಅಂದಿನ ಯುಪಿಎ ಸರ್ಕಾರವು ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಜನತೆಗೆ ಉದ್ಯೋಗ ನೀಡುವುದರ ಜತೆಗೆ ಆಹಾರ ಭದ್ರತಾ ಕಾಯ್ದೆ, ಸರ್ವ ಶಿಕ್ಷಾ ಅಭಿಯಾನ, ಮಾಹಿತಿ ಹಕ್ಕು ಕಾಯ್ದೆ ಮೂಲಕ ಜನಪರ ಆಡಳಿತ ನೀಡಿದ್ದು, ಈಗಿನ ಸರ್ಕಾರ ಕೇವಲ ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿದರು.
ಮಣಿಹಳ್ಳದಿಂದ ಬಿ.ಸಿ.ರೋಡಿನ ಕೈಕಂಬ ತನಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಪಾದಯಾತ್ರೆ ನಡೆಯಿತು.
ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಎಸ್.ಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ ಅಮ್ಮುಂಜೆ, ಬಾಲಕೃಷ್ಣ ಅಂಚನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವಿನಾ ವಿಲ್ಮಾ ಮೊರಾಸ್, ಐಡಾ ಸುರೇಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಪ್ರಮುಖರಾದ ಅಶ್ವನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ.ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ಪಿ.ವಿ.ವಗೀಸ್, ಸುದರ್ಶನ್ ಜೈನ್, ಅಬ್ಬಾಸ್ ಆಲಿ, ಪಿಯೂಸ್ ಎಲ್.ರೊಡ್ರಿಗಸ್, ಶಬೀರ್ ಸಿದ್ದಕಟ್ಟೆ, ಲುಕ್ಮಾನ್ ಬಂಟ್ವಾಳ, ಮಲ್ಲಿಕಾ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಕೆ.ಸಂಜೀವ ಪೂಜಾರಿ, ಕೆ.ಪದ್ಮನಾಭ ರೈ, ಅಬೂಬಕ್ಕರ್ ಸಿದ್ದೀಕ್, ಜೆಸಿಂತಾ ಡಿಸೋಜ, ಲೋಲಾಕ್ಷ ಶೆಟ್ಟಿ, ಜಗದೀಶ ಕುಂದರ್, ವೆಂಕಪ್ಪ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.