ಮೂಡುಬಿದಿರೆ: ಮಂಗಳವಾರ ಸಂಜೆ ಸುರಿದ ಗಾಳಿ–ಮಳೆಗೆ ತಾಲ್ಲೂಕಿನ ಬಿರಾವು ಗಾಜಿಗಾರ ಪಲ್ಕೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ.
ಗಾಳಿಗೆ ವಿದ್ಯುತ್ ಕಂಬವೂ ಉರುಳಿದೆ. ಘಟನೆಯಿಂದಾಗಿ ಮೂಡುಬಿದಿರೆ-ಬಿ.ಸಿ.ರೋಡು ಮಧ್ಯೆ ಕೆಲ ತಾಸು ಸಂಚಾರ ಸ್ಥಗಿತಗೊಂಡಿತ್ತು. ಅರಣ್ಯ ಇಲಾಖೆ, ಮೆಸ್ಕಾಂ ಹಾಗೂ ಪೊಲೀಸರು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವುಗೊಳಿಸಿದರು.
ಮಾರೂರು ಶಾಲೆ ಬಳಿ ರಜಾಕ್ ಎಂಬುವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಗುಡ್ಡಲಂಗಡಿಯ ದೈವಸ್ಥಾನ ಬಳಿ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ದಲಿತ ಕಾಲೊನಿಯಲ್ಲಿ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.