ಮೂಡುಬಿದಿರೆ: ಗಣೇಶೋತ್ಸವವು ಜನರಲ್ಲಿ ಧಾರ್ಮಿಕ ಚಿಂತನೆ ಹೆಚ್ಚಿಸಿ ಸಾಮರಸ್ಯವನ್ನು ಮೂಡಿಸಲಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಸಮಾಜ ಮಂದಿರದಲ್ಲಿ ಐದು ದಿನ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಧಾರ್ಮಿಕ ಸಭೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಮೂಡುಬಿದಿರೆಯಲ್ಲಿ ಡಾ.ಪದ್ಮನಾಭ ಉಡುಪ ಅವರು ಆರಂಭಿಸಿದ ಈ ಉತ್ಸವಕ್ಕೆ ಅಮರನಾಥ ಶೆಟ್ಟಿ ಹೊಸ ಆಯಾಮ ನೀಡಿದ್ದರು ಎಂದರು.
ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ ಅಧ್ಯಕ್ಷ ನಾರಾಯಣ ಪಿ.ಎಂ., ಮೂಡುಬಿದಿರೆಯ ಸಾರ್ವಜನಿಕ ಗಣೇಶೋತ್ಸವವನ್ನು ಊರಿನ ಹಬ್ಬವಾಗ ಆಚರಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಶಾಸಕ ಉಮಾನಾಥ ಕೋಟ್ಯಾನ್, ಟ್ರಸ್ಟ್‌ನ ಮಾಜಿ ಅಧ್ಯಕ್ಷ ಕೆ.ಶ್ರೀಪತಿ ಭಟ್, ಚೌಟರ ಅರಮನೆಯ ಕುಲದೀಪ್ ಎಂ., ಉಪಾಧ್ಯಕ್ಷರಾದ ಸುಕುಮಾರ್ ರಾವ್, ಕೊರಗಶೆಟ್ಟಿ ಭಾಗವಹಿಸಿದ್ದರು.
ಅಲಂಗಾರು ಈಶ್ವರ್ ಭಟ್ ನೇತೃತ್ವದಲ್ಲಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಆ.31ರಂದು ನಡೆಯುವ ಸಮಾರೋಪದಂದು ಸಂಜೆ ದೇವರ ಶೋಭಾಯಾತ್ರೆ ನಡೆಯಲಿದೆ. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಎಂ., ಸ್ವಾಗತಿಸಿದರು. ಚೇತನ್ ಕುಮಾರ್ ಶೆಟ್ಟಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.