ಮೂಡುಬಿದಿರೆ: ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನ ಮನೆಯೊಂದಕ್ಕೆ ಮೂಡುಬಿದಿರೆ ಪೊಲೀಸ್ ಇನ್‍ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಸೋಮವಾರ ರಾತ್ರಿ ದಾಳಿ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ.
ನಿಡ್ಡೋಡಿ ಕಲ್ಲಕುಮೇರಿನ ಮಹೇಶ, ಕಟೀಲಿನ ಯಜ್ಞೇಶ್, ಮೂಲ್ಕಿ ನಡುಗೊಡೆಯ ದಿಲೀಪ್, ಬಜಪೆ ಕೊಂಡೆಮೂಲೆಯ ಶ್ರೀಕಾಂತ್ ಬಂಧಿತರು.
ಅವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎಂಬುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ.
ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ಘಟನೆಯ ವಿವರಗಳನ್ನು ಬಾಯಿಬಿಟ್ಟಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಕಲ್ಲಕುಮೇರಿನ ಮಹೇಶ್ ಎಂದು ಗುರುತಿಸಲಾಗಿದ್ದು, ತನ್ನ ಮನೆಯನ್ನೇ ಈ ಕೃತ್ಯಕ್ಕೆ ಬಳಸಿಕೊಂಡಿದ್ದ ಎನ್ನಲಾಗಿದೆ. ಈ ಆರೋಪಿಗಳು ಗಾಂಜಾ ವ್ಯವಹಾರದಲ್ಲೂ ತೊಡಗಿಸಿದ್ದ ಆರೋಪ ಇದ್ದು, ಪೊಲೀಸ್ ತನಿಖೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.