
ಮೂಡುಬಿದಿರೆ: ರೆಡ್‌ಕ್ರಾಸ್ ಸಮಾಜಸೇವೆಗೆ ಹೆಸರಾಗಿರುವ ಸಂಸ್ಥೆಯಾಗಿದ್ದು, ಅದರ ಸದಸ್ಯರಾದ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ರೆಡ್‌ಕ್ರಾಸ್ ಅಂಥ ಶಿಕ್ಷಣವನ್ನು ಒದಗಿಸಿಕೊಡುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಅಭಯಚಂದ್ರ ಜೈನ್ ಹೇಳಿದರು.
ಮಹಾವೀರ ಪದವಿ ಕಾಲೇಜಿನಲ್ಲಿ ನಡೆಯುತ್ತಿರುವ ಯುವ ರೆಡ್‌ಕ್ರಾಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಗುರುವಾರ ಅವರು ಮಾತನಾಡಿದರು.
ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಪ್ರೇಮ್‌ಚಂದ್ರ ಶೆಟ್ಟಿ, ಸಿ.ಎಚ್.ಗಫೂರ್, ಪದವಿ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲೆ.ವಿಜಯಲಕ್ಷ್ಮೀ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಹರೀಶ್, ಪದವಿ ಕಾಲೇಜಿನ ರೆಡ್ ಕ್ರಾಸ್ ಘಟಕದ ಅಧಿಕಾರಿ ಶ್ರೀಗೌರಿ, ಯುವ ರೆಡ್‌ಕ್ರಾಸ್ ಘಟಕದ ನಾಯಕಿ ಶ್ಲಾಘನಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.