ಮೂಡುಬಿದಿರೆ: ‘ಹೆಣ್ಣು ಮಕ್ಕಳಿಗೆ ಮನೆ ಮತ್ತು ಶಾಲೆಯಲ್ಲಿ ಗೌರವ ನೀಡುವ ಸಂಸ್ಕಾರದ ಶಿಕ್ಷಣವನ್ನು ಮಕ್ಕಳಿಗೆ ಕಲಿಸಿದಾಗ ಮಹಿಳೆಗೆ ಸಮಾಜದಲ್ಲಿ ಗೌರವ ಸಿಗುತ್ತದೆ. ಮಹಿಳೆ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಸರ್ಕಾರ ಕಾನೂನು ಜಾರಿಗೊಳಿಸಿದ್ದು, ಅನ್ಯಾಯವಾದಾಗ ಧೈರ್ಯದಿಂದ ವಿರೋಧಿಸುವ ಗುಣ ಬೆಳೆಸಿಕೊಳ್ಳಬೇಕು’ ಎಂದು ಕಾರ್ಕಳದ ವಕೀಲೆ ರೇಖಾ ಡಿ.ಹೆಗ್ಡೆ ಹೇಳಿದರು.
ಕೋಟೆಬಾಗಿಲು ವೀರಮಾರುತಿ ದೇವಸ್ಥಾನ ಹಾಗೂ ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಸಹಯೋಗದಲ್ಲಿ ದ.ಕ ಜಿಲ್ಲಾ ಹೆಗ್ಗಡೆ ಮಹಿಳಾ ಘಟಕದ ವತಿಯಿಂದ ವೀರಮಾರುತಿ ಸಭಾ ಭವನದಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಸದಸ್ಯೆ ಲೀಲಾವತಿ ಆರ್.ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರು ಸಂಘಟಿತರಾಗಿ ಸಮುದಾಯದ ಅಭಿವೃದ್ಧಿಗೆ ನೆರವಾಗಬೇಕು ಎಂದು ಹೇಳಿದರು.
ಜಿಲ್ಲಾ ಹೆಗ್ಗಡೆ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಸನತ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಘಟಕದ ಮೂಡುಬಿದಿರೆ ವಲಯ ಅಧ್ಯಕ್ಷೆ ಉಷಾ ಕೆ.ಹೆಗ್ಡೆ, ನಾರಾವಿ ವಲಯ ಅಧ್ಯಕ್ಷೆ ನವ್ಯಾ ಪಿ.ಹೆಗ್ಡೆ, ಹೆಬ್ರಿ ವಲಯ ಅಧ್ಯಕ್ಷೆ ಸುನೀತಾ ಎ.ಹೆಗ್ಡೆ, ವೇಣೂರು ವಲಯ ಅಧ್ಯಕ್ಷೆ ಸುಭಾಶಿಣಿ ವಿ.ಹೆಗ್ಡೆ, ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ, ವೀರಮಾರುತಿ ದೇವಸ್ಥಾನದ ಆಡಳಿತ ಮೊಕ್ತೇಸರ ಉದಯ ಕುಮಾರ್ ಹೆಗ್ಡೆ ಭಾಗವಹಿಸಿದ್ದರು. ಚೇತನಾ ಆರ್.ಹೆಗ್ಡೆ ನಿರೂಪಿಸಿದರು. ಜಿಲ್ಲಾ ಘಟಕದ ಕಾರ್ಯದರ್ಶಿ ಮಮತಾ ಆರ್.ಹೆಗ್ಡೆ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.