ADVERTISEMENT

ಅಂತರ ವಾರ್ಸಿಟಿ ಅಥ್ಲೆಟಿಕ್ಸ್‌: ಮಂಗಳೂರು ವಿವಿ ರನ್ನರ್ ಅಪ್

​ಪ್ರಜಾವಾಣಿ ವಾರ್ತೆ
Published 9 ಜನವರಿ 2024, 7:06 IST
Last Updated 9 ಜನವರಿ 2024, 7:06 IST
ಅಖಿಲ ಭಾರತ ಅಂತರ ವಿವಿ ಪುರುಷರ ಹಾಗೂ ಮಹಿಳೆಯರ ಅಥ್ಲೆಟಿಕ್ಸ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನ ಕ್ರೀಡಾಪಟುಗಳು
ಅಖಿಲ ಭಾರತ ಅಂತರ ವಿವಿ ಪುರುಷರ ಹಾಗೂ ಮಹಿಳೆಯರ ಅಥ್ಲೆಟಿಕ್ಸ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನ ಕ್ರೀಡಾಪಟುಗಳು   

ಮೂಡುಬಿದಿರೆ: ಚೆನ್ನೈನ ತಮಿಳುನಾಡು ಫಿಸಿಕಲ್ ಎಜುಕೇಷನ್ ಆ್ಯಂಡ್ ಸ್ಪೋರ್ಟ್ಸ್‌ ವಿವಿಯಲ್ಲಿ ಈಚೆಗೆ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ಸ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯ ರನ್ನರ್‌ ಅಪ್ ಆಯಿತು. ಮಂಗಳೂರು ವಿವಿ 48 ಪಾಯಿಂಟ್ ಗಳಿಸಿತ್ತು. 

52 ಪಾಯಿಂಟ್ಸ್ ಕಲೆ ಹಾಕಿದ್ದ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯ ಚಾಂಪಿಯನ್ ಆಗಿತ್ತು. ತಲಾ 2 ಚಿನ್ನ, ಬೆಳ್ಳಿ ಹಾಗೂ 3 ಕಂಚಿನ ಪದಕಗಳು ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.

ಭುವನೇಶ್ವರದಲ್ಲಿ ಈಚೆಗೆ ನಡೆದ ಅಖಿಲ ಭಾರತ ಅಂತರ ವಿವಿ ಮಹಿಳೆಯರ ಅಥ್ಲೆಟಿಕ್ಸ್‌ನಲ್ಲಿ ಮಂಗಳೂರು ವಿವಿ ಚಾಂಪಿಯನ್ ಆಗಿತ್ತು.  ಪುರುಷ ಹಾಗೂ ಮಹಿಳೆಯರ ವಿಭಾಗಗಳಲ್ಲಿ ಭಾಗವಹಿಸಿದ ಮಂಗಳೂರು ವಿವಿ ತಂಡದ 72 ಆಟಗಾರರಲ್ಲಿ 59 ಮಂದಿ ಆಳ್ವಾಸ್‌ ಶಿಕ್ಷಣ ಸಂಸ್ಥೆಯವರು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.