ADVERTISEMENT

ಬಾಲಕನಿಗೆ ಜೀವ ಬೆದರಿಕೆ: ಆರೋಪಿ ವಶಕ್ಕೆ

ವಿಟ್ಲ: ಮತ್ತೊಂದು ಮತೀಯ ಗೂಂಡಾಗಿರಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 6:57 IST
Last Updated 9 ಜುಲೈ 2025, 6:57 IST

ವಿಟ್ಲ: ವಿಟ್ಲ ಠಾಣೆ ವ್ಯಾಪ್ತಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣ ಮಂಗಳವಾರ ನಡೆದಿದೆ. ಇಲ್ಲಿಯ ಖಾಸಗಿ ಬಸ್ ನಿಲ್ದಾಣದ ಸಮೀಪ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಆತನ ಶಾಲಾ ಸಹಪಾಠಿಯೊಬ್ಬಳ ಜೊತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದಿದ್ದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿ, ಮಂಜೇಶ್ವರ ಎಣ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

‘ಅಪ್ರಾಪ್ತ ವಯಸ್ಸಿನ ಬಾಲಕ ಸಹಪಾಠಿ ವಿದ್ಯಾರ್ಥಿನಿ ಜೊತೆ ವಿಟ್ಲದ ಖಾಸಗಿ ಬಸ್ ನಿಲ್ದಾಣದ ಬಳಿ ಮಾತನಾಡುತ್ತಿದ್ದಾಗ ಅಲ್ಲಿಗೆ ತೆರಳಿದದ  ಆರೋಪಿ ಪದ್ಮರಾಜ್, ‘ಹಿಂದೂ ಹುಡುಗಿಯ ಜೊತೆ ಮಾತನಾಡಿದ್ದು ಏಕೆ’ ಎಂದು ತಕರಾರು‌ ತೆಗೆದು ಜೀವಬೆದರಿಕೆ ಒಡ್ಡಿದ್ದ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 126(2), 352, 351(3),196(1)(a) ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.