ADVERTISEMENT

ತಿರುಚಿದ ವಿಡಿಯೊ ತೋರಿಸಿ ಹಣಕ್ಕಾಗಿ ಬೆದರಿಕೆ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 8:25 IST
Last Updated 25 ಫೆಬ್ರುವರಿ 2026, 8:25 IST
<div class="paragraphs"><p>ಬಂಧನ</p></div>

ಬಂಧನ

   

ಪ್ರಜಾವಾಣಿ ವಾರ್ತೆ

ಮಂಗಳೂರು: ನಗರದಲ್ಲಿ ಕೌಶಲ ತರಬೇತಿ ನೀಡುವ ಸಂಸ್ಥೆಯೊಂದರ ಮಾಲೀಕರಿಗೆ ಅವರ ತಿರುಚಿದ ವಿಡಿಯೊ ಕಳುಹಿಸಿ ಹಣಕ್ಕಾಗಿ ಬೆದರಿಕೆ ಒಡ್ಡಿದ ಆರೋಪಿಯನ್ನು ಉರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಉಡುಪಿ ಜಿಲ್ಲೆಯ ಕಾಪುವಿನ ಅಭಿಷೇಕ್‌ ಬಂಧಿತ ಆರೋಪಿ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆತ ಆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅವಧಿಯಲ್ಲಿ ಮಾಲೀಕರ ತಿರುಚಿದ ವಿಡಿಯೊ  ತೋರಿಸಿ ಹಣಕ್ಕಾಗಿ ಬೆದರಿಸಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.