
ಪ್ರಜಾವಾಣಿ ವಾರ್ತೆ
ಸುಳ್ಯ: ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿಯೂ ಮೃತಪಟ್ಟ ಘಟನೆ ತಾಲ್ಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ.
ಕೆಮ್ರಾಜೆ ಗ್ರಾಮದ ಮಾಪಲಕಜೆಯ ಸಂಗೀತಾ ಮತ್ತು ಆಕೆಯ ಮಗು ಮೃತರು.
ತೋಟದಲ್ಲಿನ ಕೆರೆಯ ಬಳಿ ಮಗು ಕಾಲು ಜಾರಿ ಬಿದ್ದಾಗ ರಕ್ಷಿಸಲು ಸಂಗೀತಾ ಕೂಡ ಕೆರೆಗೆ ಹಾರಿದ್ದಾರೆ. ಆದರೆ, ಈಜು ಬಾರದ ಅವರು ಮಗುವಿನೊಂದಿಗೆ ಮೃತಪಟ್ಟಿದ್ದಾರೆ.
ಸಂಗೀತಾ ಅವರ ಮೃತದೇಹ ಮೇಲೆತ್ತಲಾಗಿದ್ದು, ಮಗುವಿನ ಮೃತದೇಹವನ್ನು ತೆಗೆಯುವ ಪ್ರಯತ್ನ ನಡೆಯುತ್ತಿದೆ.
ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.