ADVERTISEMENT

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗೆ ಮಾತೃವಿಯೋಗ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 6:09 IST
Last Updated 16 ಏಪ್ರಿಲ್ 2021, 6:09 IST
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ   

ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ(88) ಶುಕ್ರವಾರ ಬೆಳಿಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರಿಗೆ 6 ಮಂದಿ ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ.

ಮಗ ಅಬ್ದುಲ್ ನಜೀರ್ ಅವರೊಂದಿಗೆ ದೆಹಲಿಯಲ್ಲೇ ನೆಲೆಸಿದ್ದರು. ಮೃತರ ಪಾರ್ಥಿವ ಶರೀರವನ್ನು ದೆಹಲಿಯಿಂದ ಸ್ವಂತ ಊರಾದ ಮೂಡುಬಿದಿರೆ ಸಮೀಪದ ಬೆಳುವಾಯಿ ಗ್ರಾಮದ ಕಾನಕ್ಕೆ ಶುಕ್ರವಾರ ತರುವ ನಿರೀಕ್ಷೆಯಿದೆ.

ನಂತರ ಅಲ್ಲೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.