ADVERTISEMENT

ಪುತ್ತೂರು | ತಾಯಿ ಕೊಲೆ: ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2025, 13:25 IST
Last Updated 30 ಏಪ್ರಿಲ್ 2025, 13:25 IST
<div class="paragraphs"><p>ಪ್ರಾಧಿನಿಧಿಕ ಚಿತ್ರ</p></div>

ಪ್ರಾಧಿನಿಧಿಕ ಚಿತ್ರ

   

ಐಸ್ಟಾಕ್ ಚಿತ್ರ

ಪುತ್ತೂರು: ಕಾಮಣ ಗ್ರಾಮದಲ್ಲಿ 6 ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಆರೋಪಿ ಪುತ್ರನಿಗೆ ಪುತ್ತೂರಿನ ಐದನೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕಾಮಣ ಗ್ರಾಮದ ಅಂಕಜಾಲು ನವಗ್ರಾಮ ಕಾಲೋನಿಯ ನಿವಾಸಿ ನಾವೂರ ಎಂಬವರ ಪುತ್ರ ಗೋಪಾಲ ಯಾನೆ ಗೋಪ ಶಿಕ್ಷೆಗೊಳಗಾದ ಅಪರಾಧಿ.

ADVERTISEMENT

ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಐ ಈರಯ್ಯ ಡಿ.ಎನ್ ತನಿಖೆ ನಡೆಸಿದ್ದರು. ಆಗಿನ ಸುಳ್ಯ ಸರ್ಕಲ್ ಇನ್‌ಸ್ಪೆಕ್ಟರ್‌ ಸತೀಶ್ ಕುಮಾರ್ ಆರ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ನ್ಯಾಯಾಧೀಶೆ ಸರಿತಾ ಡಿ. ಅವರು, ಆರೋಪಿ ಕೃತ್ಯ ಎಸಗಿರುವುದು ಸಾಬೀತಾಗಿರುವುದರಿಂದ 5 ವರ್ಷ ಶಿಕ್ಷೆ ಮತ್ತು ₹5ಸಾವಿರ ದಂಡ ವಿಧಿಸಿದ್ದಾರೆ.  ಅಭಿಯೋಜನೆಯ ಪರವಾಗಿ ಜಯಂತಿ ಕೆ.ಭಟ್  ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.