ADVERTISEMENT

ಮಂಗಳೂರು | ತ್ವರಿತವಾಗಿ ಸಾಲ ಮಂಜೂರು ಮಾಡಿ: ಕ್ಯಾ. ಬ್ರಿಜೇಶ್ ಚೌಟ

ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 5:22 IST
Last Updated 5 ಸೆಪ್ಟೆಂಬರ್ 2025, 5:22 IST
ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿದರು
ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿದರು   

ಮಂಗಳೂರು: ‘ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಬ್ಯಾಂಕ್‌ಗಳು ಸಾಲವನ್ನು ತ್ವರಿತವಾಗಿ ಮಂಜೂರು ಮಾಡಬೇಕು’ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸೂಚಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ ಸಹಯೋಗದಲ್ಲಿ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಬುಧವಾರ ಇಲ್ಲಿ ನಡೆದ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೈಯಕ್ತಿಕ ಉದ್ದಿಮೆ, ಗೃಹ ಉತ್ಪಾದನೆ ಹಾಗೂ ಆಹಾರ ಸಂಸ್ಕರಣಾ  ಉದ್ದಿಮೆ ಸೇರಿದಂತೆ ಕಿರು ಉದ್ಯಮಗಳಿಗೆ ನೆರವು ನೀಡಲು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳಿಗೆ  ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆದರೆ, ಬ್ಯಾಂಕ್‌ಗಳು ಸಾಲ ಮಂಜೂರಾತಿಗೆ  ಸತಾಯಿಸುತ್ತಿರುವ  ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದ ಯೋಜನೆಯ ಮೂಲ ಉದ್ದೇಶ ಈಡೇರುವುದಿಲ್ಲ. ಸಾಲ ಮಂಜೂರು ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ನಡೆಸಬೇಕು ಎಂದರು.

ADVERTISEMENT

ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು ಆತ್ಮನಿರ್ಭರ ಭಾರತ ಅಭಿಯಾನದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ದೇಶದಾದ್ಯಂತ ಈ ಯೋಜನೆಯಡಿ 2 ಲಕ್ಷ ಸಣ್ಣ ಉದ್ಯಮಶೀಲರಿಗೆ ಹಣಕಾಸು ಬೆಂಬಲ ನೀಡುವ ಉದ್ದೇಶವಿದೆ ಎಂದು ತಿಳಿಸಿದರು.

ಕೃಷಿ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ ಮಾತನಾಡಿ, ಈ ಯೋಜನೆಯಡಿ ಗರಿಷ್ಠ ₹15 ಲಕ್ಷದ ಸಹಾಯಧನ ದೊರಕಲಿದೆ. ಕೇಂದ್ರ ಸರ್ಕಾರದ ಶೇ 35 ಹಾಗೂ ರಾಜ್ಯ ಸರ್ಕಾರದ ಶೇ 15 ಪಾಲು ಇದೆ ಎಂದು ತಿಳಿಸಿದರು.

ಜಂಟಿ ಕೈಗಾರಿಕಾ ನಿರ್ದೇಶಕ ಗೋಕುಲದಾಸ್, ಕೆಪೆಕ್ ಅಧಿಕಾರಿ  ಅರವಿಂದ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕಿ ಕವಿತಾ ಶೆಟ್ಟಿ ಉಪಸ್ಥಿತರಿದ್ದರು. ಕೃಷಿ ಉಪನಿರ್ದೇಶಕಿ  ಕುಮುದಾ ಸ್ವಾಗತಿಸಿದರು. ಉಪನಿರ್ದೇಶಕ ಶಿವಶಂಕರ್ ದಾನೇಗೊಂಡಲ್ ನಿರೂಪಿಸಿದರು.

ಸಾಲ ಮಂಜೂರಿಗೆ ಸತಾಯಿಸುವ ಬ್ಯಾಂಕ್‌ಗಳು: ಆರೋಪ ಕೇಂದ್ರ, ರಾಜ್ಯ ಸರ್ಕಾರದ ಪಾಲಿನಲ್ಲಿ ಅನುಷ್ಠಾನ ದೇಶದಲ್ಲಿ 2 ಲಕ್ಷ ಜನರಿಗೆ ನೆರವು ನೀಡುವ ಗುರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.