ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿತಿ ಮೀರುತ್ತಿರುವ ಮಾದಕದ್ರವ್ಯ ವ್ಯಸನ ಮತ್ತು ಮಾರಾಟದ ಬಗ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ ಅಧಿವೇಶನದಲ್ಲಿ ಗಮನ ಸೆಳೆದರು.
ಮಂಗಳೂರು ನಗರವು ಉನ್ನತ ಶಿಕ್ಷಣ ಸಂಸ್ಥೆಗಳ ಕೇಂದ್ರವಾಗಿದ್ದು, ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾದಕದ್ರವ್ಯಗಳ ವ್ಯಾಪಾರಕ್ಕೆ ಹೆಚ್ಚಿನ ಅವಕಾಶ ಇರುವುದು ಅಲ್ಲಗಳೆಯಾಗದ ವಿಷಯವಾಗಿದೆ. ಕಳೆದ ವರ್ಷ ಡ್ರಗ್ಸ್ ಪ್ರಕರಣವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಶಾಮೀಲಾಗಿದ್ದು ಸಾಬೀತಾಗಿತ್ತು. ಪೊಲೀಸರಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದರೂ, ಮಾದಕದ್ರವ್ಯ ಮಾರಾಟ ಮತ್ತು ವ್ಯಸನ ಇಳಿಕೆ ಆಗಿಲ್ಲ. ಶಾಲಾ ಮಕ್ಕಳು ಕೂಡ ವ್ಯಸನಕ್ಕೆ ಒಳಗಾಗುತ್ತಿರುವುದು ಭಯಾನಕ ಎಂದು ಅವರು ಉಲ್ಲೇಖಿಸಿದರು.
ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಮಾದಕದ್ರವ್ಯ ಚಟುವಟಿಕೆ ಮಟ್ಟ ಹಾಕಬೇಕಾಗಿದೆ. ಇದರಿಂದ ಬರುವಂತಹ ಆದಾಯವನ್ನು ನೇರವಾಗಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಮಾದಕದ್ರವ್ಯದ ಜಾಲವನ್ನು ಬುಡ ಸಮೇತ ಕಿತ್ತುಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ವಿನಂತಿಸಿದರು ಎಂದು ಸಂಸದರ ಕಚೇರಿಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.