ADVERTISEMENT

ಪಂಪ್‌ವೆಲ್‌ ಮೇಲ್ಸೇತುವೆ ಪರಿಶೀಲಿಸಿದ ನಳಿನ್‌

​ಪ್ರಜಾವಾಣಿ ವಾರ್ತೆ
Published 1 ಮೇ 2020, 16:09 IST
Last Updated 1 ಮೇ 2020, 16:09 IST
ಮಂಗಳೂರಿನ ಪಂಪ್‌ವೆಲ್‌ ಮೇಲ್ಸೇತುವೆಗೆ ಭೇಟಿ ನೀಡಿದ ಸಂಸದ ನಳಿನ್‌ಕುಮಾರ್‌ ಕಟೀಲ್‌, ಪರಿಶೀಲಿಸಿದರು.
ಮಂಗಳೂರಿನ ಪಂಪ್‌ವೆಲ್‌ ಮೇಲ್ಸೇತುವೆಗೆ ಭೇಟಿ ನೀಡಿದ ಸಂಸದ ನಳಿನ್‌ಕುಮಾರ್‌ ಕಟೀಲ್‌, ಪರಿಶೀಲಿಸಿದರು.   

ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಪ್ರತ್ಯೇಕ ತಂಡದಿಂದ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಸಂಸದ ನಳಿನ್‌ಕುಮಾರ್ ಕಟೀಲ್ ಅವರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಂಪ್‌ವೆಲ್ ಮೇಲ್ಸೇತುವೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ಜತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ರಸ್ತೆ ಸಮತಟ್ಟುಗೊಳಿಸಿ, ಮಣ್ಣು ಹಾಕಿದ ಬಳಿಕ ನಿರ್ಮಿಸಿದ ತಡೆಗೋಡೆಯಲ್ಲಿ ಸಣ್ಣ ಬಿರುಕು ಉಂಟಾಗಿತ್ತು. ಅದನ್ನು ತಕ್ಷಣ ದುರಸ್ತಿ ಪಡಿಸಲಾಗಿದೆ. ಇದರಿಂದ ಮೇಲ್ಸೇತುವೆಗೆ ಯಾವುದೇ ಹಾನಿಯಾಗಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ADVERTISEMENT

ಕಾಮಗಾರಿಯಲ್ಲಿ ಏನಾದರೂ ಲೋಪ ಉಂಟಾಗಿದೆಯೆ ಎಂಬುದರ ಬಗ್ಗೆ ಪ್ರತ್ಯೇಕ ತಂಡದಿಂದ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸಂಸದ ನಳಿನ್‌ಕುಮಾರ್‌ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.