ADVERTISEMENT

ಎಂಆರ್‌ಪಿಎಲ್‌: ಅಂಗವಿಕಲರಿಗೆ ಸ್ಕೂಟರ್ ವಿತರಣೆ

​ಪ್ರಜಾವಾಣಿ ವಾರ್ತೆ
Published 17 ಮೇ 2025, 16:16 IST
Last Updated 17 ಮೇ 2025, 16:16 IST
ಅಂಗವಿಕಲರಿಗೆ ವಿತರಿಸಿದ ಸ್ಕೂಟರ್‌ಗಳು
ಅಂಗವಿಕಲರಿಗೆ ವಿತರಿಸಿದ ಸ್ಕೂಟರ್‌ಗಳು   

ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೊ ಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್‌) ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದ ಅಡಿಯಲ್ಲಿ 19 ಅಂಗವಿಕಲರಿಗೆ ಒಟ್ಟು ₹21 ಲಕ್ಷ ಮೌಲ್ಯದ ಮೂರು ಚಕ್ರದ ಸ್ಕೂಟರ್ ವಿತರಿಸಿತು.

ಶುಕ್ರವಾರ ಪಡೀಲ್‌ನ ಪ್ರಜಾಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಇಲಾಖೆ ಸಹಯೋಗದಲ್ಲಿ ಸ್ಕೂಟರ್‌ಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಶ್ಯಾಮಪ್ರಸಾದ್ ಕಾಮತ್, ಮಾನವ ಸಂಪನ್ಮೂಲ ವಿಭಾಗದ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಆಡಳಿತ ವಿಭಾಗದ ಜನರಲ್ ಮ್ಯಾನೇಜರ್ ಮನೋಜ್ ಕುಮಾರ್ ಎ, ಜಿಲ್ಲಾ ಅಂಗವಿಕಲ ಅಧಿಕಾರಿ ಮನೀಷ್ ನಾಯಕ್ ಇದ್ದರು. ‌

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.