ಮೂಲ್ಕಿ: ಮೂಲ್ಕಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆದು ನಕಲಿ ಪಾಸ್‌ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದ ಮೊಹಮ್ಮದ್ ಮುಸ್ತಫಾ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೂಲ್ಕಿಯ ವಿಜಯ ಸನ್ನಿಧಿ ಬಳಿಯ ಖಾಸಗಿ ಬ್ಯಾಂಕೊಂದರ ಬಳಿಯಲ್ಲಿ ಮೂಲ್ಕಿ ಮೂಲ್ಕಿ ಪಟ್ಟಣ ಪಂಚಾಯಿತಿಯ ಸದಸ್ಯ ಹಕೀಂ ನೇತೃತ್ವದ ಗುಂಪು ಕಾರ್ನಾಡು ನಿವಾಸಿಗಳಾದ ತಂದೆ-ಮಗನ ಮೇಲೆ ಹಲ್ಲೆ ನಡೆಸಿತ್ತು. ಈ ಸಂದರ್ಭದಲ್ಲಿ ಮೂಡಬಿದಿರೆಯ ಉದ್ಯಮಿಯೊಬ್ಬರು ತಡೆಯಲು ಬಂದಾಗ ಅವರನ್ನು ಕೊಲೆ ಮಾಡಿ ತಂದೆ-ಮಗನ ಮೇಲೆ ಕೊಲೆ ಯತ್ನ ನಡೆಸಿ ಪರಾರಿಯಾಗಿತ್ತು. ಕೊಲೆ ನಡೆಸಿದ ತಂಡದ ಸದಸ್ಯನಾಗಿದ್ದ ಮೊಹಮ್ಮದ್ ಮುಸ್ತಫಾ ಆರಂಭದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡು ನಕಲಿ ಪಾಸ್‌ಪೋರ್ಟ್ ಮೂಲಕ ಒಮನ್ ದೇಶದಲ್ಲಿ ನೆಲೆಸಿದ್ದ.
ಪ್ರಕರಣಕ್ಕೆ ಸಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಇರುತ್ತಿದ್ದರಿಂದ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿತ್ತು. ಆತ ಓಮನ್‌ನಿಂದ ನೇಪಾಳಕ್ಕೆ ಬಂದು ಅಲ್ಲಿಂದ ಭಾರತಕ್ಕೆ ಬಂದು ಮೂಲ್ಕಿಯಲ್ಲಿ ತಿರುಗಾಡುತ್ತಿದ್ದ ಎಂಬ ಮಾಹಿತಿಯಂತೆ ಸಿಸಿಬಿ ಪೊಲೀಸರು ಬಂದಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.