ADVERTISEMENT

ಮೂಲ್ಕಿ: ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಿಸಿದ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2023, 7:04 IST
Last Updated 5 ಆಗಸ್ಟ್ 2023, 7:04 IST
   

ಮಂಗಳೂರು: 'ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುಮಂತ್ ಪೂಜಾರಿ ಎಂಬಾತನನ್ನು ಬಂಧಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ‌.

'ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಸಿ) ಅಡಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಇ ಅಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ‌' ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಸಿಂಗ್ ಜೈನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT