ADVERTISEMENT

ಮೂಲ್ಕಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಉದ್ಯಮಿಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 6:49 IST
Last Updated 16 ಜುಲೈ 2025, 6:49 IST
<div class="paragraphs"><p>ಬಂಧನ </p></div>

ಬಂಧನ

   

ಮೂಲ್ಕಿ: ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತನಾಗಿದ್ದ ಉದ್ಯಮಿ ರಾಕಿ ಪಿಂಟೊ (68)ಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬಾಲಕಿಯ ತಾಯಿ ನೀಡಿದ್ದ ದೂರಿನಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನ ಸಂದರ್ಭದಲ್ಲಿ ಅಧಿಕ ರಕ್ತದೊತ್ತಡ ಉಂಟಾಗಿ ರಾಕಿ ಪಿಂಟೊ ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಪೊಲೀಸರು ನ್ಯಾಯಧೀಶರ ಮುಂದೆ ಹಾಜರು ಪಡಿಸಿದ್ದು, ಆರೋಪಿಗೆ ಜುಲೈ 25ರವರೆಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.