ADVERTISEMENT

ಅಡ್ಯಾರ್‌ ಕೊಲೆ ಪ್ರಕರಣ:ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 17:26 IST
Last Updated 14 ಜುಲೈ 2020, 17:26 IST

ಮಂಗಳೂರು: ನಗರದ ಹೊರ ವಲಯದ ಅಡ್ಯಾರ್‌ನಲ್ಲಿ ಶುಕ್ರವಾರ ರಾತ್ರಿ ನಡೆದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಯಾಕೂಬ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ಮುಹಮ್ಮದ್ ಶಾಕೀರ್‌, ಹನೀಫ್‌ ಮತ್ತು ಅಹ್ಮದ್‌ ಶಾಕೀರ್‌ ಬಂಧಿತರು. ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ. ಕೋವಿಡ್‌ ಪರೀಕ್ಷೆಗಾಗಿ ವಶಕ್ಕೆ ಪಡೆದಿದ್ದು, ಗಂಟಲ ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ನೆಗೆಟಿವ್‌ ಆದಲ್ಲಿ ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಶಾಕೀರ್‌ ಮತ್ತು ಕೊಲೆಯಾದ ಯಾಕೂಬ್‌ ನಡುವೆ ವೈಷಮ್ಯವಿತ್ತು. ಶುಕ್ರವಾರ ರಾತ್ರಿ ಮಾತುಕತೆಯ ನೆಪದಲ್ಲಿ ಕರೆಸಿಕೊಂಡ ಶಾಕೀರ್‌ ಮತ್ತು ಸಹಚರರು, ಯಾಕೂಬ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಕೃತ್ಯದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.