ಸುಳ್ಯ: ಇಲ್ಲಿನ ಶಾಂತಿನಗರದಲ್ಲಿ ಸಂಪತ್ ಎಂಬುವರನ್ನು ಗುರುವಾರ ಬೆಳಿಗ್ಗೆ ಕೊಲೆ ಮಾಡಲಾಗಿದೆ. ಸಂಪತ್ ಅವರ ಮೇಲೆ ಕೊಡಗಿನ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪ ಇತ್ತು.
ಗುರುವಾರ ಬೆಳಿಗ್ಗೆ 6 ಗಂಟೆಗೆ ಮನೆಯಿಂದ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗಾಜಿಗೆ ಗುಂಡು ಹಾರಿಸಿದ್ದಾರೆ. ಆ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್‌ಗೆ ತಾಗಿ ನಿಂತಿದೆ. ಅಲ್ಲಿಂದ ತಪ್ಪಿಸಿಕೊಂಡ ಸಂಪತ್ ಸಮೀದಲ್ಲಿದ್ದ ಕಾಂತಪ್ಪ ಎಂಬುವರ ಮನೆಗೆ ಓಡಿ ಹೋಗಿದ್ದಾರೆ. ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಹೋಗಿ ಹಲ್ಲೆ ನಡೆಸಿ ಕೊಲೆಗೈದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊಲೆಗೆ ಬಳಸಿದ ನಾಡ ಕೋವಿಯನ್ನು ಸ್ಥಳದಲ್ಲೇ ಬಿಟ್ಟಿದ್ದಾರೆ. ಸರ್ಕಲ್ ಇನ್‌ಸ್ಪೆಕ್ಟರ್ ನವೀನ್ ಚಂದ್ ಜೋಗಿ, ಎಸ್‌ಐ ಹರೀಶ್, ಹಾಗೂ ಪೋಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.