ADVERTISEMENT

ಮಂಗಳೂರು | ಮೂವರು ಯುವಕದ ಕೊಲೆ: ನಿಷ್ಪಕ್ಷಪಾತ ತನಿಖೆಗೆ ಒತ್ತಾಯ

ದ.ಕ: ಜಿಲ್ಲಾ ಪೊಲೀಸ್‌ ವರಿಷ್ಠರನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 7:02 IST
Last Updated 27 ಮಾರ್ಚ್ 2024, 7:02 IST
ಬೆಳ್ತಂಗಡಿಯ ಮೂವರು ಯುವಕರ ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಸುಭಾಶ್ಚಂದ್ರ ಶೆಟ್ಟಿ, ಪ್ರವೀಣಚಂದ್ರ ಆಳ್ವ, ಅಭಯಚಂದ್ರ ಜೈನ್, ಮಂಜುನಾಥ ಭಂಡಾರಿ ಹಾಗೂ ಹರೀಶ್ ಕುಮಾರ್‌ ಅವರನ್ನು ಒಳಗೊಂಡ ಕಾಂಗ್ರೆಸ್ ನಿಯೋಗವು ಜಿಲ್ಲಾ ಪೊಲೀಸ್ ವರಿಷ್ಠ ಸಿ.ಬಿ.ರಿಷ್ಯಂತ್‌ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು 
ಬೆಳ್ತಂಗಡಿಯ ಮೂವರು ಯುವಕರ ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಸುಭಾಶ್ಚಂದ್ರ ಶೆಟ್ಟಿ, ಪ್ರವೀಣಚಂದ್ರ ಆಳ್ವ, ಅಭಯಚಂದ್ರ ಜೈನ್, ಮಂಜುನಾಥ ಭಂಡಾರಿ ಹಾಗೂ ಹರೀಶ್ ಕುಮಾರ್‌ ಅವರನ್ನು ಒಳಗೊಂಡ ಕಾಂಗ್ರೆಸ್ ನಿಯೋಗವು ಜಿಲ್ಲಾ ಪೊಲೀಸ್ ವರಿಷ್ಠ ಸಿ.ಬಿ.ರಿಷ್ಯಂತ್‌ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು    

ಮಂಗಳೂರು: ಬೆಳ್ತಂಗಡಿಯ ಮೂವರು ಯುವಕರನ್ನು ತುಮಕೂರು ಜಿಲ್ಲೆಯಲ್ಲಿ ಕಾರಿನಲ್ಲಿ ಸುಟ್ಟು ಕೊಲೆಗೈದ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ನಿಯೋಗವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರನ್ನು ಭೇಟಿ ಮಾಡಿ ಮಂಗಳವಾರ ಮನವಿ ಸಲ್ಲಿಸಿತು.
‘ದುಷ್ಕರ್ಮಿಗಳ ತಂಡವೊಂದು ಮೋಸದಿಂದ ಈ ಮೂವರು ಯುವಕರನ್ನು ತುಮಕೂರಿಗೆ ಕರೆಸಿಕೊಂಡು ಹಣ ದೋಚಿ, ಹತ್ಯೆ ಮಾಡಿದೆ. ಹತ್ಯೆಗೀಡಾದವರು ₹ 6 ಲಕ್ಷ ಕಳೆದುಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಕೊಲೆಗಡುಕರು ₹ 60 ಲಕ್ಷದಿಂದ ₹1 ಕೋಟಿವರೆಗೂ ದೋಚಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾ ಸತ್ಯತೆಯನ್ನು ಬಯಲಿಗೆಳೆಯಬೇಕು. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇಂತಹ ಪ್ರಕರಣ ಮರುಕಳಿಸದಂತೆ ಕ್ರಮಕೈಗೊಳ್ಳಬೇಕು’ ಎಂದು ನಿಯೋಗವು ಒತ್ತಾಯಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಪಾಲಿಕೆಯ ವಿರೋಧ ಪಕ್ಷದ ನಾಯಕ ಪ್ರವೀಣಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್  ಘಟಕದ ಅಧ್ಯಕ್ಷ ಸುಭಾಷ್ಚಂದ್ರ ಶೆಟ್ಟಿ ನಿಯೋಗದಲ್ಲಿದ್ದರು.

ಇದಕ್ಕೂ ಮುನ್ನ ಕಾಂಗ್ರೆಸ್ ನಿಯೋಗವು, ಕೊಲೆಯಾದ ಮೂವರು ಯುವಕರ ಮನೆಗೆ ಭೇಟಿ ನೀಡಿ, ದುಃಖತಪ್ತ ಬಂಧುಗಳಿಗೆ ಸಾಂತ್ವನ ಹೇಳಿತು. ಸರ್ಕಾರದಿಂದ ಅಗತ್ಯ ನೆರವು ಒದಗಿಸುವುದಾಗಿ ಭರವಸೆ ನೀಡಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.