ADVERTISEMENT

ಮಂಜೇಶ್ವರದಲ್ಲಿ ಸಂಭ್ರಮದ ನಾಗರ ಪಂಚಮಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 8:47 IST
Last Updated 9 ಆಗಸ್ಟ್ 2024, 8:47 IST
   

ಮಂಗಳೂರು: ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರದ ಅನಂತೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ ಸಂಭ್ರಮ ದಿಂದ ನಡೆಯುತ್ತಿದೆ.

ಪ್ರಾತಃಕಾಲ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿಗಳು ಪ್ರಾರಂಭಗೊಂಡವು. ದೇವರಿಗೆ ವಾಸುಕಿ ಪೂಜೆ , ದೇವಳದ ಮುಂಭಾಗದಲ್ಲಿರುವ ಅಶ್ವತ್ಥ ಕಟ್ಟೆಯಲ್ಲಿ ನಾಗದೇವರ ಶಿಲಾ ಪ್ರತಿಮೆಗಳಿಗೆ ಪಂಚಾಮೃತ , ಕ್ಷೀರಾಭಿಷೇಕ, ಸೀಯಾಳಾಭಿಷೇಕ ನೆರವೇರಿತು. ಸಹಸ್ರಾರು ಭಕ್ತರು ಪೂಜೆ ಸಲ್ಲಿಸಿ ಪುನೀತರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT