ADVERTISEMENT

ಮಂಗಳೂರು: ಕೊನೆಗೂ ಉದ್ಘಾಟನೆ ಆಯ್ತು ಪಂಪ್‌ವೆಲ್ ಫ್ಲೈಓವರ್

​ಪ್ರಜಾವಾಣಿ ವಾರ್ತೆ
Published 31 ಜನವರಿ 2020, 5:01 IST
Last Updated 31 ಜನವರಿ 2020, 5:01 IST
ಪಂಪ್‌ವೆಲ್‌ ಫ್ಲೈಓವರ್ ಅನ್ನು ಶುಕ್ರವಾರ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು
ಪಂಪ್‌ವೆಲ್‌ ಫ್ಲೈಓವರ್ ಅನ್ನು ಶುಕ್ರವಾರ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು   

ಮಂಗಳೂರು: ದಶಕದ ಹಿಂದೆ ಕಾಮಗಾರಿಗೆ ಚಾಲನೆ ನೀಡಲಾಗಿದ್ದ ಪಂಪ್‌ವೆಲ್‌ ಫ್ಲೈಓವರ್ ಅನ್ನು ಶುಕ್ರವಾರ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.

2010ರಲ್ಲಿ ನವಯುಗ ಕಂಪನಿ ಈ ಕಾಮಗಾರಿ ಆರಂಭಿಸಿತ್ತು. ಆರಂಭದಲ್ಲಿ‌ ಚುರುಕಾಗಿ ನಡೆದ ಕಾಮಗಾರಿ‌ ನಂತರ ನಿಧಾನಗತಿಯಲ್ಲಿ ನಡೆದಿತ್ತು. ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿ ಪರಿಣಮಿಸಿತ್ತು.

ಫ್ಲೈಓವರ್ ಉದ್ಘಾಟನೆಗೆ ಸಂಸದ ನಳಿನ್ ಕುಮಾರ್‌ ಗಡವು ನೀಡಿದ್ದರು.‌ ಅದಾಗ್ಯೂ ಕಾಮಗಾರಿ ಪೂರ್ಣಗೊಳ್ಳದ್ದರಿಂದ ಅದರ ಉಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಲಾಗಿತ್ತು. ನಿತ್ಯ ಜಿಲ್ಲಾಡಳಿತ ವರದಿ ತರಿಸಿಕೊಂಡು, ಈ ತಿಂಗಳಾಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ನವಯುಗ ಕಂಪನಿಗೆ ತಾಕೀತು ಮಾಡಲಾಗಿತ್ತು.

ADVERTISEMENT

ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಶುಕ್ರವಾರ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್, ಬಿಜೆಪಿ ಕಾರ್ಯಕರ್ತರು, ಪಾಲಿಕೆ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.