ADVERTISEMENT

ಕಾಂಗ್ರೆಸ್‌ ಅವಧಿಯಲ್ಲಿ ಡ್ರಗ್ಸ್ ಮಾಫಿಯಾ ಇರಲಿಲ್ಲವೇ: ನಳಿನ್ ಕುಮಾರ್‌ ಕಟೀಲ್

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 7:06 IST
Last Updated 17 ಸೆಪ್ಟೆಂಬರ್ 2020, 7:06 IST
   

ಮಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಇರಲಿಲ್ಲವೇ? ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು.

ಮಂಗಳೂರಿನ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ಹಮ್ಮಿಕೊಂಡ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ರಮಾನಾಥ ರೈ, ಯು.ಟಿ. ಖಾದರ್ ಸಚಿವರಾಗಿದ್ದಾಗ ಡ್ರಗ್ಸ್ ಬಗ್ಗೆ ಯಾಕೆ ತನಿಖೆ ಮಾಡಿಲ್ಲ? ಎಂದು ಪ್ರಶ್ನಿಸಿದ ಅವರು, ಡ್ರಗ್ಸ್ ಮಾಫಿಯಾದಲ್ಲಿ ಮಂಗಳೂರಿನ ಮಾಜಿ ಮೇಯರ್ ಒಬ್ಬರ ಮಗ ಇರಲಿಲ್ಲವೇ? ಎಂದರು.

ADVERTISEMENT

ರಮಾನಾಥ ರೈ ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರು ಆಗಿದ್ದಾಗ ಜಿಲ್ಲೆಯಲ್ಲಿ ಕೊಲೆಗಳ ಸರಣಿಯೇ ನಡೆದಿತ್ತು. ಪಂಚಾಯಿತಿ ಅಧ್ಯಕ್ಷರಿಂದ ಹಿಡಿದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದವರೂ ಕೊಲೆಯಾಗಿದ್ದರು. ರಮಾನಾಥ ರೈ ಬೆಂಬಲಿಗರೇ ಮರಳು ಮಾಫಿಯಾದಲ್ಲಿ ತೊಡಗಿದ್ದರು ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರ ಬಂದ ಮೇಲೆ ಕೊಲೆಗಳ ಸರಣಿ ನಿಂತು ಹೋಗಿವೆ. ಮುಂದಿನ ಅಕ್ಟೋಬರ್‌ನಲ್ಲಿ ಮರಳು ನೀತಿ ಜಾರಿಗೆ ತರುತ್ತೇವೆ. ಮಂಗಳೂರಿನಲ್ಲಿ ಯಾವುದೇ ಪಬ್ ಪರವಾನಗಿ ನೀಡಲು ಬಿಡುವುದಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.