ADVERTISEMENT

ಜನರ ಹಾದಿ ತಪ್ಪಿಸುತ್ತಿರುವ ಕಾಂಗ್ರೆಸ್‌ ನಾಯಕರು: ನಳಿನ್‌ಕುಮಾರ್ ಕಟೀಲ್

ನರೇಂದ್ರ ಮೋದಿ ಸರ್ಕಾರಕ್ಕೆ 7 ವರ್ಷ ಪೂರ್ಣ: ‘ಕ್ಷೇಮನಿಧಿ’ಗೆ ಚಾಲನೆ ನೀಡಿದ ನಳಿನ್‌ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 31 ಮೇ 2021, 2:49 IST
Last Updated 31 ಮೇ 2021, 2:49 IST
ಬಂಟ್ವಾಳ ತಾಲ್ಲೂಕು ಬಿಜೆಪಿ ವತಿಯಿಂದ ಆರಂಭಗೊಂಡ ಕ್ಷೇಮನಿಧಿಗೆ ಸಂಸದ ನಳಿನ್‌ಕುಮಾರ್ ಕಟೀಲು ಶನಿವಾರ ಬಿ.ಸಿ.ರೋಡಿನಲ್ಲಿ ಚಾಲನೆ ನೀಡಿದರು. ಶಾಸಕ ರಾಜೇಶ ನಾಯ್ಕ್ ಇದ್ದರು.
ಬಂಟ್ವಾಳ ತಾಲ್ಲೂಕು ಬಿಜೆಪಿ ವತಿಯಿಂದ ಆರಂಭಗೊಂಡ ಕ್ಷೇಮನಿಧಿಗೆ ಸಂಸದ ನಳಿನ್‌ಕುಮಾರ್ ಕಟೀಲು ಶನಿವಾರ ಬಿ.ಸಿ.ರೋಡಿನಲ್ಲಿ ಚಾಲನೆ ನೀಡಿದರು. ಶಾಸಕ ರಾಜೇಶ ನಾಯ್ಕ್ ಇದ್ದರು.   

ಬಂಟ್ವಾಳ: ‘ಕೋವಿಡ್‌ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜನರಲ್ಲಿ ಆತ್ಮವಿಶ್ವಾಸ, ಧೈರ್ಯ ತುಂಬುವುದರ ಜೊತೆಗೆ ಕಣ್ಣೀರು ಒರೆಸುವ ಕಾಯಕದಲ್ಲಿ ಮಗ್ನರಾಗಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಮಾತ್ರ ಮನೆಯಲ್ಲೇ ಕುಳಿತು ಜನರನ್ನು ಹಾದಿ ತಪ್ಪಿಸುವುದರಲ್ಲಿ ನಿರತರಾಗಿದ್ದಾರೆ’ ಎಂದು ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏಳನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಆರಂಭಿಸಲಾದ ‘ಕ್ಷೇಮನಿಧಿ’ಗೆ ಭಾನುವಾರ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಪ್ರಾಸ್ತಾವಿಕ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಶುಭ ಹಾರೈಸಿದರು.

ADVERTISEMENT

ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಇದ್ದರು.

ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್, ಪ್ರಮುಖರಾದ ಆರ್.ಸಿ.ನಾರಾಯಣ, ಸಂದೇಶ್ ಶೆಟ್ಟಿ , ಪ್ರದೀಪ್ ಅಜ್ಜಿಬೆಟ್ಟು ಪಾಲ್ಗೊಂಡರು. ಇದೇ ವೇಳೆ ಶಾಸಕ ರಾಜೇಶ್ ನಾಯ್ಕ್ ಅವರು ಕ್ಷೇಮನಿಧಿಗೆ ₹10 ಲಕ್ಷದ ಚೆಕ್ ಹಸ್ತಾಂತರಿಸಿದರು. ಆಶಾ ಕಾರ್ಯಕರ್ತೆಯರಿಗೆ ರೈನ್ ಕೋಟ್ ಮತ್ತು 25 ಕೆ.ಜಿ. ಅಕ್ಕಿ ವಿತರಿಸಲಾಯಿತು. ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರವೀಶ್ ಕಾರ್ಕಳ ವಂದಿಸಿದರು. ಡೊಂಬಯ್ಯ ಬಿ.ಅರಳ ನಿರೂಪಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.