ADVERTISEMENT

ದುಂಡಾವರ್ತನೆ ತೋರಿದ ಕಾಂಗ್ರೆಸ್ ವಿರುದ್ಧ ಹೋರಾಟ: ನಳಿನ್‌ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2024, 13:12 IST
Last Updated 20 ಡಿಸೆಂಬರ್ 2024, 13:12 IST
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್   

ಮಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಮೇಲಿನ ಹಲ್ಲೆ ಖಂಡನೀಯ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಜೊತೆ ಚರ್ಚಿಸಿ ದುಂಡಾವರ್ತನೆ ತೋರಿದ ಕಾಂಗ್ರೆಸ್ ವಿರುದ್ಧ ಹೋರಾಟ ಕೈಗೆತ್ತಿಕೊಳ್ಳಲಾಗುವುದು. ಸುವರ್ಣ ಸೌಧದ ಒಳಗೆ ತೋರಿದ ಗೂಂಡಾ ಪ್ರವೃತ್ತಿಯು ಕಾಂಗ್ರೆಸ್ ಆಡಳಿದ ವೈಫಲ್ಯವನ್ನು ತೋರಿಸುತ್ತದೆ ಎಂದು ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಜಂಗಲ್ ರಾಜ್ಯ ನಿರ್ಮಾಣವಾಗಿದೆ. ಕಾಂಗ್ರೆಸ್ ಗೂಂಡಾಗಳಿಗೆ ಮಣೆ ಹಾಕುತ್ತಿದೆ ಎಂಬುದು ಬೆಳಗಾವಿ ಅಧಿವೇಶನದ ವೇಳೆ ಮತ್ತೊಮ್ಮೆ ಸ್ಪಷ್ಟವಾಗಿದೆ. ಸದನದ ಒಳಗೆ ನಡೆದ ವಿಚಾರಗಳ ಬಗ್ಗೆ ನಿಯಮಾನುಸಾರ ಸಭಾಪತಿ ಕ್ರಮ ಕೈಗೊಳ್ಳುತ್ತಾರೆ. ಆದರೆ, ಇಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಿ.ಟಿ.ರವಿ ಅವರನ್ನು ಬಂಧಿಸುವ ಮೂಲಕ ಅವರಿಗೆ ಅವಮಾನ ಮಾಡಲಾಗಿದೆ. ಗೃಹಸಚಿವರು ಪೊಲೀಸರನ್ನು ಕೂಲಿಯಾಳುಗಳಂತೆ ಬಳಸಿಕೊಳ್ಳುತ್ತಿದ್ದಾರೆ. ಸಿ.ಟಿ. ರವಿ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಆರೋಪಿಸಿದರು.

ಸಂವಿಧಾನದ ಘನತೆ ಗೌರವದ ಬಗ್ಗೆ ಮಾತನಾಡುವ ಕಾಂಗ್ರೆಸ್, ದೆಹಲಿ ಮತ್ತು ಕರ್ನಾಟಕದಲ್ಲಿ ಸಂವಿಧಾನದ ಕಗ್ಗೊಲೆ ಮಾಡಿದೆ. ಲೋಕಸಭೆಯಲ್ಲಿ ರಾಹುಲ್ ಗಾಂಧಿ ವರ್ತನೆ ಮತ್ತು ಸಂಸದರ ಮೇಲಿನ ಹಲ್ಲೆ ಖಂಡನೀಯ. ರಾಹುಲ್ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.