ADVERTISEMENT

ಸಮಾಜಘಾತುಕ ಶಕ್ತಿ ನಿರ್ನಾಮಕ್ಕೆ ಸರ್ಕಾರ ಬದ್ಧ: ನಳಿನ್‌ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 19:24 IST
Last Updated 11 ಆಗಸ್ಟ್ 2022, 19:24 IST
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್   

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆಗೈದ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾದ ರಾಜ್ಯದ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.

ಕೊಲೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿತ್ತು. ಹಂತಕರು ಹಾಗೂ ಸಂಚು ರೂಪಿಸಿದವರನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ರಾಷ್ಟ್ರೀಯ ತನಿಖಾ ದಳದ ಸಮಗ್ರ ತನಿಖೆಯಿಂದ ಇನ್ನಷ್ಟು ವಿವರ ಲಭ್ಯವಾಗಲಿದೆ. ಸಮಾಜಘಾತುಕ ಶಕ್ತಿಗಳನ್ನು ನಿರ್ನಾಮ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT