ಮಂಗಳೂರು: ಇಲ್ಲಿನ ನಂತೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾರೆ.
ತೊಕ್ಕೊಟ್ಟಿನ ಶಮಿತ್ ಶೆಟ್ಟಿ (29) ಅಪಘಾತದಲ್ಲಿ ಮೃತಪಟ್ಟ ಯುವಕ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತ ಯುವಕ ಜಿಲ್ಲೆಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ.
ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿದ್ದ ಶಮಿತ್ ಮನೆಗೆ ಮರಳುವಾಗ ಕಾರು ರಾಷ್ಟ್ರೀಯ ಹೆದ್ದಾರಿಯ ಪಕ್ಕ ಅಳವಡಿಸಿದ್ದ ಕಬ್ಬಿಣದ ತಡೆ ಬೇಲಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ತಡೆಬೇಲಿ ಮುರಿದು ಹೋಗಿದ್ದು, ಮಾರುತಿ ಸುಜುಕಿ ಸಿಯಾಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.