ಬೆಳ್ತಂಗಡಿ: ಇಲ್ಲಿನ ನಾರಾವಿ ಸೇಂಟ್ ಆಂಟನಿ ಪಿಯು ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಸೇಂಟ್ ಆಂಟನಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ.ಜೆರೋಮ್ ಡಿಸೋಜ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲ ಆಲ್ವಿನ್ ಸೆರಾವೊ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು.
ಉಪಪ್ರಾಂಶುಪಾಲ ಸಂತೋಷ್ ಸಲ್ದಾನ, ವಿದ್ಯಾರ್ಥಿ ಸಂಘದ ನಾಯಕಿ ಗ್ಲೆನಿಷಾ, ಉಪನಾಯಕ ಪ್ರಜ್ವಿತ್, ಕಾರ್ಯದರ್ಶಿ ಶೈಲಿ ಭಾಗವಹಿಸಿದ್ದರು. ಉಪನ್ಯಾಸಕಿ ಸೋನಿಯಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.