ADVERTISEMENT

ನಾರಾಯಣ ಗುರುಗಳ ಆದರ್ಶ ಸ್ಫೂರ್ತಿ: ಡಾ.ರಾಜೇಂದ್ರ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 8:14 IST
Last Updated 3 ಸೆಪ್ಟೆಂಬರ್ 2020, 8:14 IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪುಷ್ಪಾರ್ಚನೆ ಮಾಡಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪುಷ್ಪಾರ್ಚನೆ ಮಾಡಿದರು.   

ಮಂಗಳೂರು: ಸಮಾಜದಲ್ಲಿರುವ ಅಸಮಾನತೆಯ ವಿರುದ್ಧ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಫೂರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಅಂದು ಸಮಾಜದಲ್ಲಿ ಬೇರೂರಿದ ಜಾತಿಬೇಧ ಎನ್ನುವ ಕೆಟ್ಟ ವ್ಯವಸ್ಥೆ, ಅಸಮತೋಲನ, ಶೋಷಣೆಯ ವಿರುದ್ಧ ಧ್ವನಿ ಎತ್ತಿ ಸಾಮಾಜಿಕ ಸಮಾನತೆಯನ್ನು ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ. ಅಧಿಕಾರಿಗಳು ನಾರಾಯಣ ಗುರುಗಳ ಚಿಂತನೆಗಳನ್ನು ಮನನ ಮಾಡಿಕೊಂಡು ಸಮಾಜದಲ್ಲಿರುವ ಅಸಮಾನತನೆಯನ್ನು ಹೋಗಲಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರು ಮಾತನಾಡಿ, ಕೊವೀಡ್‌ನಿಂದಾಗಿ ಜನರ ಜೀವನ ಶೈಲಿ ಬದಲಾಗಿದ್ದು, ಇಡೀ ಜಗತ್ತೇ ಸರಳತೆಯ ಕಡೆಗೆ ಸಾಗುತ್ತಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳು ಹಲವು ವರ್ಷಗಳ ಹಿಂದೆಯೇ ಸರಳತೆಯ ತತ್ವವನ್ನು ಪ್ರತಿಪಾದಿಸಿದ್ದರು. ಸಮಾಜದಲ್ಲಿರುವ ಜಾತಿ ಬೇಧವನ್ನು ಹೋಗಲಾಡಿಸುವಲ್ಲಿ ತಮ್ಮ ಬದುಕಿನುದ್ದಕ್ಕೂ ಹೋರಾಡಿದ ಮಹಾನ್ ಗುರುಗಳು. ಶಿಕ್ಷಣ ಒಂದೇ ಸಮಾಜದಲ್ಲಿ ಗೌರವ ತಂದುಕೊಡಬಲ್ಲದು ಎಂದು ಸಾರಿದ ಅವರು, 1912 ರಲ್ಲಿ ಮಂಗಳೂರಿನ ಗೋಕರ್ಣ ಕ್ಷೇತ್ರದ ಶಿಲಾನ್ಯಾಸವನ್ನು ನೆರವೇರಿಸಿದ್ದರು ಎಂದು ಹೇಳಿದರು.

ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.