ADVERTISEMENT

ನಾರಾಯಣಗುರು ಪರಿವರ್ತನೆಯ ಹರಿಕಾರ: ನಳಿನ್‌ಕುಮಾರ್ ಕಟೀಲ್

ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2021, 11:45 IST
Last Updated 23 ಆಗಸ್ಟ್ 2021, 11:45 IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನಾರಾಯಣಗುರು ಜಯಂತಿಯಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್ ದೀಪ ಬೆಳಗಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನಾರಾಯಣಗುರು ಜಯಂತಿಯಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್ ದೀಪ ಬೆಳಗಿದರು.   

ಮಂಗಳೂರು: ‘ಶೋಷಿತರು ಮತ್ತು ಹಿಂದುಳಿದವರ ಶ್ರೇಯೋಭಿವೃದ್ಧಿಗೆ ನಾರಾಯಣ ಗುರುಗಳ ಹೋರಾಟ ಅವಿರಸ್ಮರಣೀಯವಾದದ್ದು’ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳವಾಗಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯಲ್ಲಿ ಅವರು ಮಾತನಾಡಿದರು. ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಪರಿವರ್ತನೆಯ ಹರಿಕಾರರಾಗಿ ಅವರು ಸಮಾಜದ ಒಳಿತಿಗಾಗಿ ದುಡಿದಿದ್ದಾರೆ. ಅವರ ಆಚಾರ ವಿಚಾರ ಹಾಗೂ ಆದರ್ಶಗಳನ್ನು ಎಲ್ಲರೂ ಪಾಲಿಸುವಂತಾಗಬೇಕು ಎಂದರು.

ಶಾಸಕರ ವೇದವ್ಯಾಸ್ ಕಾಮತ್, ಮೂಡ ಅಧ್ಯಕ್ಷ ರವಿಶಂಕರ್ ಮಿಜಾರು, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ADVERTISEMENT

ವಿವಿಧ ಇಲಾಖೆಗಳ ಅಧಿಕಾರಿಗಳು, ಬಿಲ್ಲವ ಸಂಘದ ಹಾಗೂ ಯುವ ವಾಹಿನಿಯ ಪದಾಧಿಕಾರಿಗಳು, ನಾರಾಯಣ ಗುರುಗಳ ಅನುಯಾಯಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.