ನಾರಾಯಣ ಗುರು
ಮಂಗಳೂರು: ನಾರಾಯಣ ಗುರು ಯುವ ವೇದಿಕೆ ರಜತ ಸಂಭ್ರಮ, ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ಇದೇ 28ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಬೆಳಿಗ್ಗೆ 10.30ಕ್ಕೆ ಉದ್ಘಾಟಿಸುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಪದಕ ಪ್ರದಾನ ಮಾಡುವರು. ಶಾಸಕ ವೇದವ್ಯಾಸ ಕಾಮತ್ ವಿದ್ಯಾರ್ಥಿವೇತನ ವಿತರಿಸುವರು. ವೇದಿಕೆ ಅಧ್ಯಕ್ಷ ಸುದರ್ಶನ್ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು.
ವೇದಿಕೆ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಬೆಳಿಗ್ಗೆ 9ರಿಂದ ‘ಮರಿಯಲದ ಮಿನದನ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಉದ್ಘಾಟಿಸುವರು. ಬದುಕು ಸಂಬಂಧಗಳ ಬಗ್ಗೆ ಪ್ರಾಧ್ಯಾಪಕ ಸೇಸಪ್ಪ ಅಮೀನ್ ಸೇಸಪ್ಪ ಅಮೀನ್ ಮಾತನಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.