ADVERTISEMENT

ಮಂಗಳೂರು | ಮಕ್ಕಳ ಚಲನವಲನ ಗಮನಿಸಿ: ಜಿಲ್ಲಾಧಿಕಾರಿ ದರ್ಶನ್

ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‌ ಸಭೆಯಲ್ಲಿ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 3:58 IST
Last Updated 27 ಜೂನ್ 2025, 3:58 IST
<div class="paragraphs"><p>ಜಿಲ್ಲೆಯಲ್ಲಿ 2 ಬಾಲ್ಯ ವಿವಾಹ ಪ್ರಕರಣ ಪಂಚಾಯಿತಿಯಲ್ಲಿ ಕಾವಲು ಸಮಿತಿ ರಚಿಸಿ ಬಾಲ್ಯವಿವಾಹ: 1098 ಸಹಾಯವಾಣಿಗೆ ದೂರು ನೀಡಿ</p></div>

ಜಿಲ್ಲೆಯಲ್ಲಿ 2 ಬಾಲ್ಯ ವಿವಾಹ ಪ್ರಕರಣ ಪಂಚಾಯಿತಿಯಲ್ಲಿ ಕಾವಲು ಸಮಿತಿ ರಚಿಸಿ ಬಾಲ್ಯವಿವಾಹ: 1098 ಸಹಾಯವಾಣಿಗೆ ದೂರು ನೀಡಿ

   

ಮಂಗಳೂರು: ಶಾಲಾ-ಕಾಲೇಜು ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗದಂತೆ, ಅದರಿಂದ ಸಂಭವಿಸಬಹುದಾದ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಶ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‌ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ADVERTISEMENT

ಅರಿವು ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಇರುವ ಮಕ್ಕಳ ಮಾಹಿತಿಯನ್ನು ಡಿಡಿಪಿಯು ಹಾಗೂ ಡಿಡಿಪಿಐ ನೀಡಬೇಕು. ಮಾದಕ ವ್ಯಸನಕ್ಕೆ ತುತ್ತಾದ ಮಕ್ಕಳು ಖಿನ್ನತೆಗೆ ಜಾರುತ್ತಾರೆ. ಇದರಿಂದ ಮಕ್ಕಳ ಬೆಳವಣಿಗೆ ಹಾಗೂ ತೂಕ ಕುಂಠಿತಗೊಳ್ಳುತ್ತದೆ. ಕೈಗಳಲ್ಲಿ ಚುಚ್ಚಿದ ಗಾಯಗಳು ಅಥವಾ ಕಣ್ಣು ಕೆಂಪಾಗುವಿಕೆ ಇದ್ದಲ್ಲಿ ಪೋಷಕರು ಮಕ್ಕಳ ಚಲನವಲನದ ಬಗ್ಗೆ ನಿಗಾವಹಿಸಬೇಕು. ಇಲ್ಲವಾದಲ್ಲಿ ಕುಟುಂಬದ ಸ್ವಾಸ್ಥ್ಯ ಹಾಳಾಗಲು ಪ್ರಾರಂಭವಾಗುತ್ತದೆ. ಈ ಬಗ್ಗೆ ಪೋಷಕರು ಹಾಗೂ ಶಾಲಾ-ಕಾಲೇಜುಗಳು, ಹಾಸ್ಟೆಲ್‍ಗಳಲ್ಲಿ ಮಕ್ಕಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದರು. 

ಚಾರಣ ಪ್ರದೇಶ, ದೇವಸ್ಥಾನ ಹಾಗೂ ಇತರ ಕಡೆ ಟ್ರಕ್ಕಿಂಗ್ ಹೋಗುವ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಗ್ಗೆ ತೀವ್ರ ನಿಗಾವಹಿಸಬೇಕು. ಇವರಲ್ಲಿ ಮಾದಕ ವ್ಯಸನಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮಾತನಾಡಿ, ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿ ಗಾಂಜಾ ಬೆಳೆಯಲಾಗುತ್ತಿದೆಯೇ ಎಂಬುದನ್ನು ಕಾಲಕಾಲಕ್ಕೆ ಪರಿಶೀಲಿಸಬೇಕು ಎಂದರು.

ಡಿಸಿಪಿ ಸಿದ್ದಾರ್ಥ್ ಗೋಯಲ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷಕುಮಾರ್ ಜಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.