
ಪ್ರಜಾವಾಣಿ ವಾರ್ತೆಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾದತ್ತ ಪ್ರಯಾಣ ಬೆಳೆಸಿದರು.
ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಪ್ರಧಾನಿ ಅವರು, ಬಳಿಕ ವಾಯುಪಡೆ ವಿಮಾನದಲ್ಲಿ ಗೋವಾ ತೆರಳಿದರು.
ವಿಮಾನ ನಿಲ್ದಾಣದಲ್ಲಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು ಬೀಳ್ಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.