ಉಪ್ಪಿನಂಗಡಿ: ರಾಷ್ಟ್ರ ಮಟ್ಟದ ಕ್ರಾಸ್‌ಕಂಟ್ರಿ ಆಯೋಜಿಸಲು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅವಕಾಶ ಲಭಿಸಿದ್ದು, ಈ ಕೂಟವನ್ನು ಯಶಸ್ವಿಯಾಗಿ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ಜಾತಿ-ಮತ-ಭೇದ ಮರೆತು, ಪಕ್ಷಾತೀತವಾಗಿ ಸಹಭಾಗಿಗಳಾಗಬೇಕು ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾರ್ಯಾಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ಕುಮಾರ್ ಕ್ರೀಡಾಕೂಟದ ಬಗ್ಗೆ ಮಾಹಿತಿ ನೀಡಿ, 10 ಕಿ.ಮೀ ಕ್ರಾಸ್ ಕಂಟ್ರಿ ನಡೆಯಲಿದ್ದು, ದೇಶದ ವಿವಿಧೆಡೆಯಿಂದ 1,200 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. 30 ಮಂದಿ ತಾಂತ್ರಿಕ ಅಧಿಕಾರಿಗಳು ಬರಲಿದ್ದಾರೆ. ದೇಶದಲ್ಲೇ ಪ್ರಥಮ ಬಾರಿಗೆ ಸ್ಪರ್ಧೆಯ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡಲಾಗುವುದು ಎಂದು ತಿಳಿಸಿದರು.
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಮಾತನಾಡಿ, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಊರಿನ ಪ್ರಮುಖರು ಪಕ್ಷಾತೀತವಾಗಿ ಇದರಲ್ಲಿ ಕೈಜೋಡಿಸಬೇಕು ಎಂದರು.
ಸಮಿತಿ ರಚನೆ: ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರನ್ನು ಒಳಗೊಂಡ ಸಮಿತಿ ರಚಿಸಿರುವ ಬಗ್ಗೆ ಡಾ.ರಾಜಾರಾಮ್ ಕೆ.ಬಿ. ತಿಳಿಸಿದರು.
ವಿವಿಧ ಉಪ ಸಮಿತಿಗಳನ್ನು ರಚಿಸುವ ಬಗ್ಗೆ ನಿರ್ಧರಿಸಲಾಯಿತು.
ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ ಪ್ರಭು, ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರಾಡ್ರಿಗಸ್, ಸಹಸ್ರಲಿಂಗೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್, ಸದಸ್ಯರಾದ ಕೃಷ್ಣ ರಾವ್ ಅರ್ತಿಲ, ದೇವಿದಾಸ ರೈ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಅಶ್ರಫ್ ಬಸ್ತಿಕ್ಕಾರ್, ಜಾನ್ ಕೆನ್ಯೂಟ್, ವಿನ್ಸೆಂಟ್ ಫರ್ನಾಂಡಿಸ್, ಗ್ರಾಮ ಪಂಚಾಯಿತಿ ಸದಸ್ಯರಾದ ಯು.ಟಿ.ತೌಸೀಫ್, ಅಬ್ದುಲ್ ರಶೀದ್, ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳಾದ ಅಬ್ದುಲ್ ರಹಿಮಾನ್ ಯುನಿಕ್, ಅಜೀಜ್ ಬಸ್ತಿಕ್ಕಾರ್, ಜಯಂತ ಪೊರೋಳಿ, ಇಸ್ಮಾಯಿಲ್ ಇಕ್ಬಾಲ್, ಚಂದಪ್ಪ ಮೂಲ್ಯ, ಆದಂ ಕೊಪ್ಪಳ, ಅನಿ ಮಿನೇಜಸ್, ಅನುರಾಧಾ ಶೆಟ್ಟಿ, ಕೈಲಾರ್ ರಾಜ್‌ಗೋಪಾಲ್ ಭಟ್, ಶರೀಕ್ ಅರಫ, ಯು. ರಾಮ, ನಝೀರ್ ಮಠ ಭಾಗವಹಿಸಿದ್ದರು.
ಕಾಲೇಜಿನ ಪ್ರಭಾರ ಪ್ರಾಚಾರ್ಯ ಶೇಖರ್ ಸ್ವಾಗತಿಸಿ, ಉಪನ್ಯಾಸಕರಾದ ಬಾಲಾಜಿ ವಂದಿಸಿದರು. ಪ್ರಮೋದ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.