ADVERTISEMENT

12ರಂದು ರಾಷ್ಟ್ರೀಯ ಲೋಕ ಅದಾಲತ್

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 5:20 IST
Last Updated 4 ಜುಲೈ 2025, 5:20 IST
National Lok Adalat on the 12th
National Lok Adalat on the 12th   

ಉಜಿರೆ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಸಮಿತಿ ಆಶ್ರಯದಲ್ಲಿ ತಾಲ್ಲೂಕು ಕಾನೂನು ಸೇವಾಸಮಿತಿ ಸಹಯೋಗದಲ್ಲಿ ಜುಲೈ 12 ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ  ಬೆಳ್ತಂಗಡಿಯಲ್ಲಿ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ.ಹೇಳಿದರು.

ಬೆಳ್ತಂಗಡಿಯ ನ್ಯಾಯಾಲಯದ ಸಭಾಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಅವಕಾಶವಿದೆ. ವಕೀಲರುಹಾಗೂ ವಿಮಾ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಕ್ಷಿದಾರರಿಗೆ ರಾಜಿಸಂಧಾನದ ಮೂಲಕ ಪ್ರಕರಣ ಇತ್ಯರ್ಥಗೊಳಿಸಲು ಮನ ಒಲಿಸುವಂತೆ ಕೋರಲಾಗಿದೆ. ರಾಜಿಸಂಧಾನದಲ್ಲಿ ಇತ್ಯರ್ಥವಾದರೆ ಹಣ ಮತ್ತು ಸಮಯ ಉಳಿತಾಯದೊಂದಿಗೆ ತ್ವರಿತ ನ್ಯಾಯದಾನದೊಂದಿಗೆ ನೆಮ್ಮದಿಯೂ ಸಿಗುತ್ತದೆ ಎಂದು ಹೇಳಿದರು.

ಮೂರು ನ್ಯಾಯಲಯಗಳಲ್ಲಿ ನಾಲ್ಕು ಸಾವಿರಕ್ಕೂ  ಅಧಿಕ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ ಎಂದು ಅವರು ತಿಳಿಸಿದರು.

ADVERTISEMENT

ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಎಚ್., ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕಾರ್ಯದರ್ಶಿ ನವೀನ್ ಬಿ.ಕೆ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.