ಬಂಟ್ವಾಳ: ದೇಶದಲ್ಲಿ ಜಾತೀಯತೆಗೆ ಬದಲಾಗಿ ರಾಷ್ಟ್ರೀಯತೆ ಮೇಳೈಸಿದಾದ ಭಾರತ ವಿಶ್ವಗುರು ಆಗಲು ಸಾಧ್ಯವಿದೆ ಎಂದು ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ ಹೇಳಿದರು.
ಇಲ್ಲಿನ ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ನಡೆದ ನಾರಾಯಣ ಗುರುಗಳ ಜನ್ಮದಿನಾಚರಣೆ, ಗುರು ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಬಂಟ್ವಾಳ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬೂಡ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿದರು.
ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಸದಾನಂದ ಪೂಜಾರಿ, ಉದ್ಯಮಿ ಸದಾನಂದ ಪೂಜಾರಿ ಪುಣೆ ಅವರಿಗೆ ಸಾಧನಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸ್ಥಳದಾನಿ ಸುರೇಶ್ ಅಂಚನ್ ಅವರಿಗೆ ಸನ್ಮಾನ, ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಕ್ಷರ ಪುರಸ್ಕಾರ ಮತ್ತು ಅನಾರೋಗ್ಯ ಪೀಡಿತರಿಗೆ ಆರೋಗ್ಯ ನಿಧಿ ವಿತರಿಸಲಾಯಿತು.
ಪುರೋಹಿತ ಸೀತಾರಾಮ ಶಾಂತಿ, ಸಂಘದ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಅಳಕೆ, ನಿತ್ಯಾನಂದ ಪೂಜಾರಿ ಕೆಂತಲೆ, ಸಂಘದ ಪದಾಧಿಕಾರಿಗಳಾದ ಯೋಗೀಶ್ ಪೂಜಾರಿ ಕೇರ್ನಡೆ, ಸಂತೋಷ್ ಪೂಜಾರಿ ಬೆಟ್ಟುಕೋಡಿ, ರಮೇಶ್ ಪೂಜಾರಿ ಮಜಲು ಭಾಗವಹಿಸಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ರತ್ನಾಕರ ಪೂಜಾರಿ ಮದಂಗೋಡಿ ಸ್ವಾಗತಿಸಿ, ಮಹಿಳಾ ಸಮಿತಿ ಅಧ್ಯಕ್ಷೆ ಅನುರಾಧ ಜಾನುಗುರಿ ವಂದಿಸಿದರು. ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.