ADVERTISEMENT

24ರಂದು ನವೋದಯ ಸಂಘದ ಸದಸ್ಯರಿಗೆ ಸಮವಸ್ತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2025, 11:41 IST
Last Updated 20 ಮಾರ್ಚ್ 2025, 11:41 IST

ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ ವತಿಯಿಂದ, ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಮಾರ್ಚ್ 24ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.

ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್‌ ಎಂ.ಪಿ. ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು.

ಶಾಸಕ ಡಿ. ವೇದವ್ಯಾಸ ಕಾಮತ್ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರವನ್ನು ವಿತರಿಸಲಿರುವರು. ಕರ್ನಾಟಕ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜ ಹಾಗೂ ಅದಾನಿ ಫೌಂಡೇಶನ್ ಅಧ್ಯಕ್ಷ ಕಿಶೋರ್ ಅಳ್ವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.