ADVERTISEMENT

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ನಝೀರ್‌

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 14:28 IST
Last Updated 11 ಜೂನ್ 2025, 14:28 IST
   

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತರಾಗಿರುವ ನೂರ್ ಜಹಾನ್ ಖಾನಂ ಅವರನ್ನು ವರ್ಗಾವಣೆ ಮಾಡಿರುವ ನಗರಾಭಿವೃದ್ಧಿ ಇಲಾಖೆ, ಅವರ ಸ್ಥಾನಕ್ಕೆ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿರುವ ಮೊಹಮ್ಮದ್ ನಝೀರ್ ಅವರನ್ನು ನಿಯೋಜಿಸಿದೆ.‌

ಮೊಹಮ್ಮದ್ ನಝೀರ್ ಅವರು ಈ ಹಿಂದೆಯೂ ಮುಡಾ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾಗಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಅವರು ಈ ಹಿಂದೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT