ADVERTISEMENT

ಮಂಗಳೂರು: 4 ಸಾವಿರ ಕುಟುಂಬಗಳಿಗೆ ₹9.5 ಕೋಟಿ ನೆರವು ಇಂದು

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 6:48 IST
Last Updated 25 ಡಿಸೆಂಬರ್ 2025, 6:48 IST
<div class="paragraphs"><p>ಪ್ರಕಾಶ್ ಶೆಟ್ಟಿ</p></div>

ಪ್ರಕಾಶ್ ಶೆಟ್ಟಿ

   

ಮಂಗಳೂರು: ಎಂ.ಆರ್.ಜಿ. ಗ್ರೂಪ್‌ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ ‘ನೆರವು-2025’ ಗುರುವಾರ (ಡಿ.25) ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಲಿದೆ.

ಮಾಧ್ಯಮಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಎಂ.ಆರ್.ಜಿ.ಗ್ರೂಪ್‌ನ ಚೇರ್ಮನ್ ಪ್ರಕಾಶ್ ಶೆಟ್ಟಿ ಅವರು, ‘ಯೋಜನೆ ಏಳನೇ ವರ್ಷ ಪೂರೈಸುತ್ತಿದ್ದು, ಕಾರ್ಯಕ್ರಮದಲ್ಲಿ ಸುಮಾರು 4000 ಕುಟುಂಬಗಳು ಹಾಗೂ 100ಕ್ಕೂ ಅಧಿಕ ಸಂಘ ಸಂಸ್ಥೆಗಳಿಗೆ ಒಟ್ಟು ₹9 ಕೋಟಿಗೂ ಅಧಿಕ ಮೊತ್ತದ ನೆರವು ವಿತರಣೆಯಾಗಲಿದೆ. ಇನ್ನು ಮೂರು ವರ್ಷಗಳ ಕಾಲ ಯೋಜನೆ ಮುಂದುವ ರಿಯಲಿದೆ. ದಶಮಾನೋತ್ಸವ ಬಳಿಕ ‘ನೆರವು’ ಯೋಜನೆಯ ಫಲಾನುಭವಿಗಳನ್ನು ಸೇರಿಸಿಕೊಂಡು ಅದಕ್ಕೊಂದು ಸಾಮೂಹಿಕ ರೂಪ ಕೊಡುವ ಚಿಂತನೆ ಇದೆ. ಈ ವಿಸ್ತರಣೆಯಿಂದ ಪ್ರತಿ ವರ್ಷ ಕನಿಷ್ಠ ಹದಿನಾಲ್ಕು ಸಾವಿರ ಕುಟುಂಬಗಳಿಗೆ ನೆರವು ಕೊಡಲು ಸಾಧ್ಯವಾಗಲಿದೆ’ ಎಂದರು.

ADVERTISEMENT

‘ನಮ್ಮ ತಂಡವು ಜಾತಿ, ಧರ್ಮ, ಪಂಗಡ ಮುಂತಾದ ಭೇದಭಾವಗಳಿಲ್ಲದೆ, ನೆರವಿನ ಅಗತ್ಯ ಇರುವವರನ್ನು ಹುಡುಕಿ, ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಿದೆ. ಅಂಗವಿಕಲರು, ನಿರಂತರ ಚಿಕಿತ್ಸೆಯ ಅನಿವಾರ್ಯತೆ ಇರುವವರು, ಶಿಕ್ಷಣ ಮುಂದುವರಿಕೆಗೆ ನೆರವು ಬೇಕಾದವರು, ಏಕಪೋಷಕರ ಮಕ್ಕಳು, ಸಾಂಸ್ಕೃತಿಕ, ಶಿಕ್ಷಣ, ಕ್ರೀಡಾ ಕ್ಷೇತ್ರದ ಸಾಧಕರು ನೆರವಿನ ಬೆಂಬಲ ಪಡೆಯಲಿದ್ದಾರೆ. ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಕೊಪ್ಪ, ಸಕಲೇಶಪುರ ಭಾಗದ ಜೊತೆಗೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಿಂದ ಬಂದ ಅರ್ಜಿಗಳನ್ನು ಸಹ ಪರಿಶೀಲಿಸಿ ಆಯ್ಕೆ ಮಾಡಲಾಗಿದೆ ಎಂದರು.

ನೆರವು ವಿತರಣಾ ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಚಿತ್ರ ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾಗವಹಿಸುತ್ತಾರೆ. ಮೂಡುಬಿದಿರೆ ಅಳ್ವಾಸ್ ಎಜುಕೇಷನ್ ಟ್ರಸ್ಟ್‌ನ ಡಾ. ಮೋಹನ್ ಆಳ್ವ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ. ಗ್ರೂಪ್‌ನ ಆಡಳಿತ ನಿರ್ದೇಶಕ ಗೌರವ್ ಪಿ. ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.