ADVERTISEMENT

ಬಂಟ್ವಾಳ: ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 7:15 IST
Last Updated 1 ಆಗಸ್ಟ್ 2025, 7:15 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬಂಟ್ವಾಳ: ಕಳೆದ ಎರಡು ದಿನಗಳ ಹಿಂದೆ ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶ್ವಾಲ್ಯ ಗ್ರಾಮದ ಕೊರತಿಗುರಿ ನಿವಾಸಿ ಹೇಮಂತ್ ಆಚಾರ್ಯ (21) ಅವರ ಮೃತದೇಹ ಮಂಗಳೂರಿನ ಬಜಾಲ್ ಸಮೀಪದ ಮುಗೇರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಗುರುವಾರ ಪತ್ತೆಯಾಗಿದೆ.

ADVERTISEMENT

ಎರಡು ದಿನಗಳ ಹಿಂದೆ ಬಂಟ್ವಾಳ ಜಕ್ರಿಬೆಟ್ಟು ನೇತ್ರಾವತಿ ನದಿ ತೀರದಲ್ಲಿ ಅವರ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪತ್ತೆಯಾಗಿತ್ತು. ಸ್ಥಳೀಯರ ನೆರವಿನಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸಿದ್ದರು. ಈ ಬಗ್ಗೆ ಕಂದಾಯ ಇಲಾಖೆ ಮತ್ತು ಪೊಲೀಸರು ಗುರುವಾರ ಎನ್‌ಡಿಆರ್‌ಎಫ್‌ ತಂಡ ಮತ್ತು ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನು ಕರೆಸಿದ್ದು, ಈ ತಂಡವು ಡ್ರೋನ್ ಬಳಸಿ ಶೋಧ ‌ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.