ಮಂಗಳೂರು: ನ್ಯಾಷನಲ್ ಫೆಡರೇಶನ್ ಆಫ್ ಸ್ಟೇಟ್ ಕೋ ಆಪರೇಟಿವ್ ಬ್ಯಾಂಕ್ ಇದರ ಅಧ್ಯಕ್ಷ ಕೊಂಡೂರು ರವೀಂದರ್ ರಾವ್ ಎಸ್‌ಸಿಡಿಸಿಸಿ ಬ್ಯಾಂಕಿಗೆ ಬುಧವಾರ ಭೇಟಿ ನೀಡಿ ಬ್ಯಾಂಕಿನ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಜಿಲ್ಲೆಯ ರೈತ ಸಮುದಾಯದ ಒಡನಾಡಿಯಾಗಿ ರೈತಸ್ನೇಹಿ ಬ್ಯಾಂಕ್ ಆಗಿದೆ. ದೇಶದ ಸಹಕಾರಿ ಆಂದೋಲನಕ್ಕೆ ಡಿಸಿಸಿ ಬ್ಯಾಂಕ್ ಮಾದರಿಯಾಗಿದೆ. ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಉತ್ತಮ ನಾಯಕತ್ವದಲ್ಲಿ ಬ್ಯಾಂಕ್ ಅಭಿವೃದ್ಧಿಯ ಪಥವನ್ನು ಕಂಡಿದೆ. ಗ್ರಾಮೀರಿಗೆ ಉತ್ತಮ ಸೇವೆ ನೀಡು ತ್ತಿರುವ, ಬ್ಯಾಂಕ್ ದೊಡ್ಡ ಪ್ರಗತಿಯನ್ನು ಮಾಡಿದೆ ಎಂದು ಶ್ಲಾಘಿಸಿದರು.
ಬ್ಯಾಂಕಿನ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ರವೀಂದ್ರ ಬಿ. ಅವರು ಬ್ಯಾಂಕಿನ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೊಂಡೂರು ರವೀಂದರ್ ರಾವ್ ಅವರನ್ನು ಬ್ಯಾಂಕ್ ವತಿಯಿಂದ ಸನ್ಮಾನಿ ಸಲಾಯಿತು. ಬ್ಯಾಂಕಿನ ಮಹಾ ಪ್ರಬಂಧಕ ಗೋಪಿನಾಥ್ ಭಟ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.