ಉಜಿರೆ: ಜ್ಞಾನದಾಸೋಹದ ಕೇಂದ್ರಗಳಾದ ಶಾಲೆಗಳು ಸರ್ವಧರ್ಮೀಯರ ಶ್ರದ್ಧಾಕೇಂದ್ರವಾಗಿವೆ ಎಂದು ಎಸ್‌ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾ ಘಟಕದ ಅಧಿಕಾರಿ ಮಹೇಶ್ ಕುಮಾರ್ ಶೆಟ್ಟಿ ಹೇಳಿದರು.
ನಿಡ್ಲೆ ಗ್ರಾಮದಲ್ಲಿರುವ ಸರ್ಕಾರಿ ಶಾಲೆಗೆ ಉಜಿರೆಯ ಬದುಕು ಕಟ್ಟೋಣ ತಂಡ, ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಇತರ ಸೇವಾಸಂಸ್ಥೆಗಳ ಸಹಯೋಗದಲ್ಲಿ ಕಾಯಕಲ್ಪ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಡಂತ್ಯಾರಿನ ಪ್ರಶಾಂತ್‌ರಾಜ್, ಬದುಕು ಕಟ್ಟೋಣ ತಂಡದ ಮೋಹನ ಕುಮಾರ್, ಪ್ರಸಾದ್ ಶೆಟ್ಟಿ ಏಣಿಂಜೆ, ಮೋಹನ್ ಪೂಜಾರಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.