ADVERTISEMENT

ನಿಫಾ: ದ.ಕ.ಜಿಲ್ಲೆಯಲ್ಲಿ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 15:02 IST
Last Updated 7 ಸೆಪ್ಟೆಂಬರ್ 2021, 15:02 IST

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾದ ಬೆನ್ನಲ್ಲೇ ಗಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

‘ಕಾಯಿಲೆ ಪೀಡಿತರ ನೇರ ಸಂಪರ್ಕಕ್ಕೆ ಬಂದವರಿಗೆ ಮಾತ್ರ ಈ ರೋಗ ಹರಡುತ್ತದೆ. ಆದರೂ, ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೇರಳದಿಂದ ಬರುವವರಿಗೆ ಕೋವಿಡ್ ಆರ್‌ಟಿಪಿಸಿಆರ್ ಪರೀಕ್ಷೆ ಜತೆಗೆ, ರೋಗ ಲಕ್ಷಣ ಇದ್ದವರಿಗೆ, ನಿಫಾ ವೈರಸ್‌ಗೆ ಸಂಬಂಧಿಸಿದ ತಪಾಸಣೆಯನ್ನೂ ನಡೆಸುವಂತೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಜ್ವರ, ಇನ್ನಿತರ ರೋಗ ಲಕ್ಷಣ ಇರುವವರು ಆಸ್ಪತ್ರೆಗೆ ಬಂದರೆ, ಕೋವಿಡ್ ಜತೆಗೆ ನಿಫಾ ಬಗ್ಗೆಯೂ ಎಚ್ಚರ ವಹಿಸುವಂತೆ ಜಿಲ್ಲೆಯ ಎಲ್ಲ ವೈದ್ಯರಿಗೆ ಐಎಂಎ ಮೂಲಕ ಸೂಚನೆ ನೀಡಲಾಗುವುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.