ADVERTISEMENT

ಉಜಿರೆ | ಧರ್ಮಸ್ಥಳಕ್ಕೆ ನಿಶ್ಚಲಾನಂದನಾಥ ಸ್ವಾಮೀಜಿ ಭೇಟಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 5:08 IST
Last Updated 5 ಸೆಪ್ಟೆಂಬರ್ 2025, 5:08 IST
ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಧರ್ಮಸ್ಥಳಕ್ಕೆ ಗುರುವಾರ ಭೇಟಿ ನೀಡಿದರು
ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಧರ್ಮಸ್ಥಳಕ್ಕೆ ಗುರುವಾರ ಭೇಟಿ ನೀಡಿದರು    

ಉಜಿರೆ: ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಧರ್ಮಸ್ಥಳಕ್ಕೆ ಗುರುವಾರ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿಈಚಿನ ಬೆಳವಣಿಗೆ ಬಗ್ಗೆ ಚರ್ಚಿಸಿದರು. ದಶಕಗಳಿಂದ ದೇವಾಲಯದ ಪರಂಪರೆಯನ್ನು ಕಾಪಾಡಿಕೊಂಡು ಬಂದಿರುವ ಹೆಗ್ಗಡೆಯವರ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಾತಿ-ಮತ ಭೇದವಿಲ್ಲದೆ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ ಪವಿತ್ರ ಕ್ಷೇತ್ರದ ಗೌರವ ಮತ್ತು ಪಾವಿತ್ರ್ಯ ಕಾಪಾಡುವುದಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ADVERTISEMENT
ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ  ನಿಶ್ಚಲಾನಂದನಾಥ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.