ADVERTISEMENT

ಸುರತ್ಕಲ್‌ ಎನ್‌ಐಟಿಕೆ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2021, 8:42 IST
Last Updated 26 ಡಿಸೆಂಬರ್ 2021, 8:42 IST
ಸುರತ್ಕಲ್‌ ಎನ್‌ಐಟಿಕೆ ಎಂಜಿನಿಯರಿಂಗ್‌ ವಿದ್ಯಾರ್ಥಿ
ಸುರತ್ಕಲ್‌ ಎನ್‌ಐಟಿಕೆ ಎಂಜಿನಿಯರಿಂಗ್‌ ವಿದ್ಯಾರ್ಥಿ   

ಮಂಗಳೂರು: ಸುರತ್ಕಲ್‌ ಎನ್‌ಐಟಿಕೆಯಲ್ಲಿ ಬಿಇ ಎಲೆಕ್ಟ್ರಿಕಲ್‌ ಅಂಡ್‌ ಎಲೆಕ್ಟ್ರಾನಿಕ್ಸ್‌ ದ್ವಿತೀಯ ವರ್ಷದ ಎಂಜಿನಿಯರಿಂಗ್‌ ವ್ಯಾಸಂಗ್‌ ಮಾಡುತ್ತಿದ್ದ ಬಿಹಾರ ರಾಜ್ಯದ ಪಾಟ್ನಾ ನಗರದ ಸೌರವ್‌ (19) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಸೌರವ್‌ ಅವರ ತಂದೆಯ ಹೆಸರಿನಲ್ಲಿ ಡೆತ್‌ನೋಟ್‌ ಬರೆದಿದ್ದು, ಶೈಕ್ಷಣಿಕ ಸಾಲ ಪಡೆದು ಬಿಇ ವ್ಯಾಸಂಗ ಮಾಡುತ್ತಿದ್ದು, ಓದು ಮುಗಿಯುವವರೆಗೆ ಸಾಲ ಹೆಚ್ಚಾಗುವ ಭಯ ಹಾಗೂ ಉದ್ಯೋಗ ಸಿಗದೇ ಇದ್ದರೆ ಹೇಗೆ ಎಂಬ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ. ನನ್ನ ಸಾವಿಗೆ ಯಾರೂ ಕೂಡ ಕಾರಣರಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಸೌರವ್‌ ಪೋಷಕರು ತುಂಬಾ ಬಡವವರು ಎಂದು ತಿಳಿದು ಬಂದಿದ್ದು, ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಅವರು ನಮಗೆ ಬರುವುದಕ್ಕೆ ಆಗುವುದಿಲ್ಲ ಸುರತ್ಕಲ್‌ನಲ್ಲಿಯೇ ಅಂತ್ಯಕ್ರಿಯೆ ಮಾಡಿ ಎಂದು ತಿಳಿಸಿದ್ದಾರೆ. ಆದರೆ, ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಮೃತ ದೇಹವನ್ನು ಪಾಟ್ನಾಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದಾರೆ. ಮಗನ ಸಾವಿನ ಬಗ್ಗೆ ಪೋಷಕರು ಕೂಡ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ. ಸೌರವ್‌ ಎಸ್ಸೆಸ್ಸೆಲ್ಸಿ ಓದುತ್ತಿದ್ದಾಗ ಕೂಡ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಪೋಷಕರು ಮಾಹಿತಿ ನೀಡಿದ್ದಾರೆ. ಸುರತ್ಕಲ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.