ADVERTISEMENT

ನಿಟ್ಟೆ: ಆವಿಷ್ಕಾರ ಸಮಿತಿಗೆ ಉತ್ತಮ ಶ್ರೇಯಾಂಕ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 16:24 IST
Last Updated 6 ಡಿಸೆಂಬರ್ 2021, 16:24 IST

ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಾಂಸ್ಥಿಕ ಆವಿಷ್ಕಾರ ಸಮಿತಿಗೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದಿಂದ 3.5 ಸ್ಟಾರ್‌ ಶ್ರೇಯಾಂಕ ಲಭಿಸಿದೆ.

ದೇಶದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಸಾಂಸ್ಥಿಕ ಆವಿಷ್ಕಾರ ಸಮಿತಿಗಳು ಕೈಗೊಂಡ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಮೌಲ್ಯಮಾಪನಕ್ಕೆ ಒಳಪಡಿಸಿ, ಒಟ್ಟು 4 ಸ್ಟಾರ್ ಶ್ರೇಯಾಂಕಕ್ಕೆ 3.5 ಸ್ಟಾರ್ ಶ್ರೇಯಾಂಕವನ್ನು ನೀಡಲಾಗಿದೆ.

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯವು ಸಾಂಸ್ಥಿಕ ಆವಿಷ್ಕಾರ ಸಮಿತಿಯನ್ನು 2020ರ ನವೆಂಬರ್ 24ರಂದು ಅಧಿಕೃತ ಆದೇಶದ ಮೂಲಕ ಸ್ಥಾಪಿಸಿದೆ. ವಿಶ್ವವಿದ್ಯಾಲಯದ ಎಲ್ಲ ಅಂಗ ಸಂಸ್ಥೆಗಳು ಹಾಗೂ ಕಾಲೇಜುಗಳಲ್ಲಿ ಸಂಶೋಧನೆ, ಉದ್ಯಮಶೀಲತೆ ಪ್ರೋತ್ಸಾಹಿಸಿ, ವಿದ್ಯಾರ್ಥಿಗಳನ್ನು ಉತ್ತೇಜಿಸಲು ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ.

ADVERTISEMENT

ಸಾಂಸ್ಥಿಕ ಆವಿಷ್ಕಾರ ಸಮಿತಿಯು ನಿರಂತರವಾಗಿ ಐಡಿಯಾಥಾನ್‌, ಆರೋಗ್ಯ ಹ್ಯಾಕಥಾನ್ ಸ್ಪರ್ಧೆಗಳು, ಸ್ವಯಂ ಪ್ರೇರಿತ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದೆ. ಇವಷ್ಟೇ ಅಲ್ಲದೆ, ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.