ADVERTISEMENT

ಶಾಲಾ ಶುಲ್ಕ: ಒತ್ತಡ ಹೇರಿದರೆ ನಿರ್ದಾಕ್ಷಿಣ್ಯ ಕ್ರಮ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 6:37 IST
Last Updated 12 ಜೂನ್ 2020, 6:37 IST

ಮಂಗಳೂರು: ಶಾಲಾ ಶುಲ್ಕ ಪಾವತಿಸಲು ಸಾಧ್ಯವಿಲ್ಲದ ಅಥವಾ ಪಾವತಿಸಲು ನಿರಾಕರಿಸುವ ಪೋಷಕರಿಂದ ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡುವಂತಿಲ್ಲ. ಶಾಲೆಗಳು ಶುಲ್ಕ ಕಟ್ಟುವ ವಿಷಯದಲ್ಲಿ ಪೋಷಕರಿಗೆ ಯಾವುದೇ ರೀತಿಯ ಒತ್ತಡ ಹೇರಬಾರದು. ಶುಲ್ಕವನ್ನು ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿರುವ ಕುರಿತು ಯಾವುದೇ ದೂರುಗಳು ಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಡಿಡಿಪಿಐ ಎಚ್ಚರಿಸಿದ್ದಾರೆ.

ಜಿಲ್ಲೆಯಲ್ಲಿ ಕೆಲವು ಖಾಸಗಿ ಶಾಲೆಯವರು ಶಾಲಾ ಶುಲ್ಕವನ್ನು ವಸೂಲು ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪೋಷಕರಿಂದ ದೂರವಾಣಿ ಮೂಲಕ ಹಲವು ದೂರುಗಳು ಬರುತ್ತಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT